ಬಳ್ಳಾರಿ : ಕೃಷಿಹೊಂಡದಲ್ಲಿ ಬಿದ್ದು ಬಾಲಕ ಸಾವನ್ನಪ್ಪಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಕರ್ಜಿಗನೂರು ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕನನ್ನು ವೀರೇಶ್ (13) ಎಂದು ಗುರುತಿಸಲಾಗಿದೆ. ಕುರಿ ಮೇಯಿಸಲು ಹೋಗಿದ್ದ ವೀರೇಶ್ ಕೆರೆಯಲ್ಲಿ ನೀರು ಕುಡಿಯಲು ಹೋಗಿ ಆಯತಪ್ಪಿ ಕೃಷಿಹೊಂಡದಲ್ಲಿ ಬಿದ್ದು ಮೃತಪಟ್ಟಿದ್ದಾನೆ .ಸದ್ಯ , ಶವವನ್ನು ಹೊರ ತೆಗೆಯಲಾಗಿದ್ದು, ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

