ಬಳ್ಳಾರಿ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ ಘಟನೆ ಬಳ್ಳಾರಿ ಜಿಲ್ಲೆ ಸಿಡಿಗಿನಮೊL ಗ್ರಾಮದಲ್ಲಿ ನಡೆದಿದೆ.
ರಾಜೇಶ್(11), ಶಿವಶಂಕರ್(12) ಮೃತಪಟ್ಟವರು ಎಂದು ಗುರುತಿಸಲಾಗಿದೆ. ನಿನ್ನೆ ಕ್ರಿಕೆಟ್ ಆಟವಾಡಿ ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಇಬ್ಬರೂ ಬಾಲಕರು ಈಜು ಬಾರದೆ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಾಜೇಶ್, ಶಿವಶಂಕರ್ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಪರಮದೇವನಹಳ್ಳಿ(ಪಿ.ಡಿ. ಹಳ್ಳಿ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.