HomeLatest NewsBREAKING : ಬೆಂಗಳೂರಲ್ಲಿ ಘೋರ ದುರಂತ ; ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ...

BREAKING : ಬೆಂಗಳೂರಲ್ಲಿ ಘೋರ ದುರಂತ ; ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕೂಲಿ ಕಾರ್ಮಿಕರು ದುರ್ಮರಣ.!

ಬೆಂಗಳೂರು: ನಗರದ ದಕ್ಷಿಣ ತಾಲೂಕಿನ ಮಾದಪಟ್ಟಣ ಗ್ರಾಮದ ಸಮೀಪದ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ 7 ಮಂದಿ ಕೂಲಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. ಈ ಘಟನೆ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮೃತರ ಕುಟುಂಬಗಳಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

ಮಾಹಿತಿಯ ಪ್ರಕಾರ, ಕ್ವಾರಿಯಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಬೃಹತ್ ಬಂಡೆ ಕುಸಿದು ಬಿದ್ದಿದೆ. ಪರಿಣಾಮ ಅವಶೇಷಗಳಡಿ ಸಿಲುಕಿದ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಘಟನೆ ತಿಳಿಯುತ್ತಿದ್ದಂತೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ.

ಅವಶೇಷಗಳಡಿ ಇನ್ನೂ ಯಾರಾದರೂ ಸಿಲುಕಿರುವ ಸಾಧ್ಯತೆಯನ್ನು ಪರಿಶೀಲಿಸಲಾಗುತ್ತಿದ್ದು, ಜೆಸಿಬಿ ಯಂತ್ರಗಳ ಸಹಾಯದಿಂದ ಬಂಡೆಗಳನ್ನು ತೆರವುಗೊಳಿಸುವ ಕಾರ್ಯ ಮುಂದುವರಿದಿದೆ. ಮೃತರ ಗುರುತು ಪತ್ತೆ ಹಾಗೂ ದುರಂತಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರ ಕುಟುಂಬಗಳಿಗೆ ಅಗತ್ಯ ನೆರವು ಒದಗಿಸುವ ಕುರಿತು ಕ್ರಮ ಕೈಗೊಳ್ಳಲಾಗಿದೆ. ಕ್ವಾರಿಯಲ್ಲಿ ಸುರಕ್ಷತಾ ನಿಯಮಗಳನ್ನು ಪಾಲಿಸಲಾಗಿತ್ತೇ ಎಂಬುದರ ಬಗ್ಗೆಯೂ ತನಿಖೆ ನಡೆಯುತ್ತಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular