ಬೆಂಗಳೂರಿನಲ್ಲಿ ಘೋರ ದುರಂತ ಸಂಭವಿಸಿದ್ದು, ಕಾರು ಹರಿದು ಒಂದೂವರೆ ವರ್ಷದ ಮಗು ಸಾವನ್ನಪ್ಪಿದೆ. ಮೃತ ಮಗುವನ್ನ ಒಂದೂವರೆ ವರ್ಷದ ಉಮರ್ ಫಾರೂಕ್ ಎಂದು ಗುರುತಿಸಲಾಗಿದೆ. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮನೆಯ ಹೊರಗೆ ಮಗು ಆಟ ಆಡುತ್ತಿತ್ತು. ಈ ವೇಳೆ ಮನೆ ಮಾಲೀಕ ಕಾರು ರಿವರ್ಸ್ ತೆಗೆದಿದ್ದಾನೆ. ಮಗು ಇರುವುದನ್ನ ನೋಡದೇ ಮಾಲೀಕ ರಿವರ್ಸ್ ತೆಗೆದುಕೊಂಡಿದ್ದಾನೆ. ಆಗ ಕಾರು ಮಗುವಿಗೆ ಡಿಕ್ಕಿ ಹೊಡೆದಿದೆ. ಚಕ್ರಕ್ಕೆ ಸಿಲುಕಿ ಪುಟ್ಟ ಕಂದಮ್ಮ ಗಂಭೀರವಾಗಿ ಗಾಯಗೊಂಡಿದೆ. ಗಂಭೀರವಾಗಿ ಗಾಯಗೊಂಡಿದ್ದ ಮಗು ಆಸ್ಪತ್ರೆಗೆ ದಾಖಲಿಸುವ ಮಾರ್ಗಮಧ್ಯೆ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.
ಕುಟುಂಬವೊಂದು ಬಾಡಿಗೆಗೆ ಮನೆ ಪಡೆದು ವಾಸವಾಗಿತ್ತು. ಆ ಮನೆಯ ಮಾಲೀಕ ಕಾರನ್ನು ರಿವರ್ಸ್ ತೆಗೆಯುವಾಗ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಮಾಲೀಕನ ಸ್ವಾಮಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.