ಬೆಂಗಳೂರು : ಅಪಾರ್ಟ್ ಮೆಂಟ್’ ನಿಂದ ಜಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿಯ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ.
2 ದಿನಗಳ ಹಿಂದೆ ಮಾದನಾಯಕನಹಳ್ಳಿಯಲ್ಲಿರುವ ಅಕ್ಕನ ಮನೆಗೆ ಬಂದಿದ್ದ26 ವರ್ಷದ ಲೋಕೇಶ್ 24 ನೇ ಮಹಡಿಯಿಂದ ಜಿಗಿದು ಮೃತಪಟ್ಟಿದ್ದಾರೆ. ಪ್ರೆಸ್ಟೀಜ್ ಅಪಾರ್ಟ್ ಮೆಂಟ್ ನಲ್ಲಿ ಈ ಘಟನೆ ನಡೆದಿದೆ. ಅಕ್ಕ-ಭಾವ ಮನೆಯಲ್ಲಿ ಇಲ್ಲದಿರುವ ವೇಳೆ ಲೋಕೇಶ್ ಸೂಸೈಡ್ ಮಾಡಿಕೊಂಡಿದ್ದಾರೆ. ಲೋಕೇಶ್ ಬೀಳುವ ದೃಶ್ಯ ಸಿಸಿಸಿವಿಯಲ್ಲಿ ಸೆರೆಯಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
You Might Also Like
TAGGED:ಆತ್ಮಹತ್ಯೆ.