ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ ಸಂಭವಿಸಿದ್ದು, ಇಬ್ಬರು ಹೆಣ್ಣು ಮಕ್ಕಳ ಜೊತೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ.
ಚಿಕ್ಕಬಳ್ಳಾಪುರ ತಾಲೂಕಿನ ರಂಗಸ್ಥಳ ಬಳಿಯ ರಂಗಧಾಮ ಕೆರೆಗೆ ಹಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ತಾಯಿ ಲಾವಣ್ಯ(30), ಮಕ್ಕಳಾದಂತ ನಿಹಾರಿಕಾ (12), ನೇಹಾ (9) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
TAGGED:ತಾಯಿ ಆತ್ಮಹತ್ಯೆ