ದಾವಣಗೆರೆ : ದಾವಣಗೆರೆಯಲ್ಲಿ ಘೋರ ದುರಂತ ಸಂಭವಿಸಿದ್ದು, ಯುಪಿಎಸ್ ಸ್ಪೋಟ ಸಂಭವಿಸಿ ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ
ಮೃತರನ್ನು ವಿಮಲಾ ಮತ್ತು ಕುಮಾರ್ ಎಂದು ಗುರುತಿಸಲಾಗಿದೆ. ರುದ್ರಮುನಿಸ್ವಾಮಿ ಹಿರೇಮಠ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ದಾವಣಗೆರೆ ನಗರದ ಕಾಯಿಪೇಠೆಯಲ್ಲಿ ಈ ಘಟನೆ ನಡೆದಿದೆ.
ಅಗ್ನಿ ಅವಘಡದಿಂದ ಇಬ್ಬರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ . ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
You Might Also Like
TAGGED:UPS' ಸ್ಪೋಟ