ಹಾಸನ : ಹಾಸನದಲ್ಲಿ ಘೋರ ದುರಂತ ಸಂಭವಿಸಿದ್ದು, ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ ಕೆಎಸ್ ಆರ್ ಟಿಸಿ ಬಸ್ ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯಾ ಬಳಿ ನಡೆದಿದೆ.
ಪಾಳ್ಯಾ ಬಳಿ ಈ ಘಟನೆ ನಡೆದಿದ್ದು, ಚೆಕ್ಕಿಂಗ್ ಇನ್ಪೆಕ್ಟರ್ ಶಕುನಿಗೌಡ (67) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹೆದ್ದಾರಿಯಲ್ಲಿ ಬಸ್ ತಡೆದು ಚೆಕ್ಕಿಂಗ್ ಮಾಡುವಾಗ ಲಾರಿ ಡಿಕ್ಕಿಯಾಗಿದೆ. ಕೆಳಗೆ ಬಿದ್ದ ಶಕುನಿಗೌಡ ಮೇಲೆ ಲಾರಿ ಚಕ್ರ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
