ಕಾರು ಪಲ್ಟಿಯಾಗಿ ಹೊತ್ತಿ ಉರಿದು ಇಬ್ಬರು ಸಜೀವವಾಗಿ ದಹನಗೊಂಡ ಘಟನೆ ಹೊನ್ನಾವರದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ವಿಷಯ ತಿಳಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಆದರೆ ಅಷ್ಟರಲ್ಲೇ ಕಾರಿನಲ್ಲಿದ್ದ ಇಬ್ಬರು ಸುಟ್ಟು ಕರಕಲಾಗಿದ್ದಾರೆ.
ಮೃತರ ಗುರುತು ಪತ್ತೆಯಾಗಿಲ್ಲ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೃತರ ಗುರುತು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

