BREAKING : ಮಂಡ್ಯದಲ್ಲಿ ಘೋರ ದುರಂತ : ಟಿಪ್ಪರ್ ಡಿಕ್ಕಿಯಾಗಿ ಕಾರು ಹೊತ್ತಿ ಉರಿದು ಚಾಲಕ ಸಜೀವ ದಹನ.!

ಮಂಡ್ಯ : ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿಯಲ್ಲಿ ಕಾರೊಂದು ಹೊತ್ತಿ ಉರಿದಿದ್ದು, ಚಾಲಕ ಸಜೀವವಾಗಿ ದಹನಗೊಂಡಿದ್ದಾನೆ.

ಟಿಪ್ಪರ್ ಗೆ ಇನೋವಾ ಕಾರು ಡಿಕ್ಕಿಯಾಗಿ ಕಾರಿಗೆ ಬೆಂಕಿ ತಗುಲಿದೆ. ನಂತರ ಕಾರಿನಿಂದ ಹೊರಬರಲಾರದೇ ಚಂದ್ರಶೇಖರ್ ಎಂಬುವವರು ಸಜೀವವಾಗಿ ದಹನವಾಗಿದ್ದಾರೆ. ಮೃತರನ್ನು ಹುಣಸೂರು ಮೂಲದ ಚಂದ್ರಶೇಖರ್ ಎಂದು ಗುರುತಿಸಲಾಗಿದೆ. ಬೆಂಕಿ ತಗುಲಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದೆ. ಆದರೆ ಅಷ್ಟರಲ್ಲೇ ಚಂದ್ರಶೇಖರ್ ಸುಟ್ಟು ಕರಕಲಾಗಿದ್ದರು. ಅಪಘಾತಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read