HomeLatest NewsBREAKING : ಮಂಡ್ಯದಲ್ಲಿ ಘೋರ ದುರಂತ : ತಲೆಮೇಲೆ ವಿದ್ಯುತ್ ಕಂಬ ಮುರಿದು ಬಿದ್ದು ಸ್ಥಳದಲ್ಲೇ...

BREAKING : ಮಂಡ್ಯದಲ್ಲಿ ಘೋರ ದುರಂತ : ತಲೆಮೇಲೆ ವಿದ್ಯುತ್ ಕಂಬ ಮುರಿದು ಬಿದ್ದು ಸ್ಥಳದಲ್ಲೇ ‘ಲೈನ್ ಮ್ಯಾನ್’ ಸಾವು.!

ಮಂಡ್ಯ : ಮಂಡ್ಯದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ತಲೆಮೇಲೆ ವಿದ್ಯುತ್ ಕಂಬ ಮುರಿದು ಬಿದ್ದು ಲೈನ್ ಮ್ಯಾನ್ ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಕುಲುಮೆದೊಡ್ಡಿ ಗ್ರಾಮದ ಕುಮಾರ್ (31) ಎಂದು ಗುರುತಿಸಲಾಗಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಸಹಳ್ಳಿಯಲ್ಲಿ ಈ ಘಟನೆ ನಡೆದಿದೆ.

ವಿದ್ಯುತ್ ಲೈನ್ ಕೆಲಸ ಮಾಡುವ ವೇಳೆ ಕಂಬ ಅಳವಡಿಸುವಾಗ ವಿದ್ಯುತ್ ಕಂಬ ಮುರಿದು ಕಂಬ ಲೈನ್ ಮ್ಯಾನ್ ತಲೆ ಮೇಲೆ ಬಿದ್ದಿದೆ. ಗಂಭೀರವಾಗಿ ಗಾಯಗೊಂಡ ಕುಮಾರ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular