HomeKarnatakaBREAKING : ನಿಶ್ಚಿತಾರ್ಥವಾಗಿದ್ದ SBI ಉದ್ಯೋಗಿಗಳಿಬ್ಬರೂ ಆತ್ಮಹತ್ಯೆ; ಪರಸ್ಪರ ವಿಡಿಯೋ ಕಾಲ್ ಮಾಡಿಕೊಂಡು ಸೂಸೈಡ್

BREAKING : ನಿಶ್ಚಿತಾರ್ಥವಾಗಿದ್ದ SBI ಉದ್ಯೋಗಿಗಳಿಬ್ಬರೂ ಆತ್ಮಹತ್ಯೆ; ಪರಸ್ಪರ ವಿಡಿಯೋ ಕಾಲ್ ಮಾಡಿಕೊಂಡು ಸೂಸೈಡ್


ಕಾಸರಗೋಡು : ನಿಶ್ಚಿತಾರ್ಥವಾಗಿದ್ದ SBI ಬ್ಯಾಂಕ್ ಉದ್ಯೋಗಿಗಳಾದ ಕಾಸರಗೋಡು ಮತ್ತು ಕಣ್ಣೂರು ಮೂಲದ ಯುವ ಜೋಡಿ ಪ್ರತ್ಯೇಕ ಸ್ಥಳಗಳಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಘಟನೆಯಿಂದ ಎರಡೂ ಕುಟುಂಬಗಳಲ್ಲಿ ಆಘಾತ ಮೂಡಿದೆ.

ಕಾಸರಗೋಡು ಜಿಲ್ಲೆಯ ಪಳ್ಳಿಕ್ಕರ ಪೂಚಕ್ಕಾಡ್ ನಿವಾಸಿ ಪಿ. ಅನುಶ್ರೀ (25) ಅವರು ಮೈಸೂರು ಜಿಲ್ಲೆಯ ಹುಣಸೂರಿನ ಬಾಡಿಗೆ ಮನೆಯಲ್ಲಿ ಮೃತಪಟ್ಟಿದ್ದಾರೆ. ಅವರು ಹುಣಸೂರಿನ ಎಸ್ಬಿಐ ಶಾಖೆಯಲ್ಲಿ ಉದ್ಯೋಗಿಯಾಗಿದ್ದರು.

ಇದಾದ ಕೆಲವೇ ಗಂಟೆಗಳ ಬಳಿಕ, ಅನುಶ್ರೀ ಅವರೊಂದಿಗೆ ನಿಶ್ಚಿತಾರ್ಥವಾಗಿದ್ದ ಕಣ್ಣೂರು ಮೂಲದ ವಿ. ಅಮಲ್ (26) ಅವರು ಎರ್ನಾಕುಲಂ ನಾರ್ತ್ ರೈಲ್ವೆ ನಿಲ್ದಾಣದ ಬಳಿಯ ಹೋಟೆಲ್ನಲ್ಲಿ ಮೃತಪಟ್ಟಿದ್ದಾರೆ. ಅಮಲ್ ಅವರು ಎರ್ನಾಕುಲಂನ ಎಂ.ಜಿ. ರೋಡ್ ಎಸ್ಬಿಐ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿಸೆಂಬರ್ 26ಕ್ಕೆ ಮದುವೆ ನಿಗದಿ
ಅನುಶ್ರೀ ಮತ್ತು ಅಮಲ್ ಅವರ ನಿಶ್ಚಿತಾರ್ಥ ಇತ್ತೀಚೆಗಷ್ಟೇ ನಡೆದಿತ್ತು. ಡಿಸೆಂಬರ್ 26ರಂದು ಮದುವೆ ದಿನಾಂಕ ನಿಗದಿಯಾಗಿತ್ತು. ಕಳೆದ ಶನಿವಾರ ಇಬ್ಬರೂ ಕಾಸರಗೋಡಿನ ಮನೆಗೆ ಬಂದಿದ್ದು, ಭಾನುವಾರ ಸಂಜೆ ತಮ್ಮ ಕೆಲಸದ ಸ್ಥಳಗಳಿಗೆ ಮರಳಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.ಬುಧವಾರ ಬೆಳಗ್ಗೆ ಇಬ್ಬರೂ ವಿಡಿಯೋ ಕರೆ ಮೂಲಕ ಮಾತನಾಡಿದ್ದರು. ಬಳಿಕ ಪ್ರತ್ಯೇಕ ಸ್ಥಳಗಳಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೆ ವಿಡಿಯೋ ಕರೆಯಲ್ಲಿ ಏನು ಮಾತುಕತೆ ನಡೆದಿದೆ ಅಥವಾ ಸಾವಿಗೆ ನಿಖರ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಇಬ್ಬರೂ ಯಾವುದೇ ಡೆತ್ ನೋಟ್ ಬರೆದಿಟ್ಟಿಲ್ಲ ಎಂದು ವರದಿಯಾಗಿದೆ.

ಅಮಲ್ ಅವರ ಸ್ನೇಹಿತ ನೀಡಿದ ಮಾಹಿತಿಯ ಆಧಾರದ ಮೇಲೆ ಎರ್ನಾಕುಲಂ ಟೌನ್ ನಾರ್ತ್ ಪೊಲೀಸರು ಹೋಟೆಲ್ಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಅನುಶ್ರೀ ಮತ್ತು ಅಮಲ್ ಅವರ ಸಾವಿನ ಕುರಿತು ಸಂಬಂಧಪಟ್ಟ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮದುವೆಗೆ ಕೆಲವೇ ತಿಂಗಳು ಬಾಕಿ ಇರುವಾಗ ಸಂಭವಿಸಿದ ಈ ದುರಂತ ಎರಡೂ ಕುಟುಂಬಗಳನ್ನು ಶೋಕದಲ್ಲಿ ಮುಳುಗಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular