ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ಇಂದು ಮನಕಲಕುವ ಘಟನೆಯೊಂದು ಸಂಭವಿಸಿದೆ. ಕೃಷಿ ಹೊಂಡದಲ್ಲಿ ಈಜಲು ಹೋದ ನಾಲ್ವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಬೇಸಿಗೆಯ ರಜೆ ಹಾಗೂ ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಮಕ್ಕಳು ಹತ್ತಿರದ ಜಮೀನಿನಲ್ಲಿದ್ದ ಕೃಷಿ ಹೊಂಡಕ್ಕೆ ಈಜಲು ಹೋಗಿದ್ದರು. ಈ ವೇಳೆ ನೀರಿನ ಆಳ ತಿಳಿಯದೇ ಒಬ್ಬರನ್ನೊಬ್ಬರು ಉಳಿಸಲು ಹೋಗಿ ನಾಲ್ವರೂ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತಪಟ್ಟ ಮಕ್ಕಳ ವಿವರ:
- ಕಿರಣ್ (6 ವರ್ಷ)
- ಬಸಮ್ಮ (11 ವರ್ಷ)
- ಶರತ್ (6 ವರ್ಷ)
- ಹನುಮೇಶ್ (7 ವರ್ಷ)
ಒಂದೇ ಗ್ರಾಮದ ನಾಲ್ವರು ಮಕ್ಕಳು ಸಾವನ್ನಪ್ಪಿರುವುದು ಗ್ರಾಮದಲ್ಲಿ ಶೋಕ ಸಾಗರವೇ ಹರಿಯುವಂತೆ ಮಾಡಿದೆ. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಸ್ಥಳೀಯರು ಮಕ್ಕಳ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

