HomeIndiaSHOCKING: ಭೂ ಒತ್ತುವರಿ ವಿರೋಧಿಸಿದ ಮಹಿಳೆಯರನ್ನು ಮಣ್ಣಿನಲ್ಲಿ ಸೊಂಟದವರೆಗೆ ಹೂತು ಹಾಕಿದ ದುರುಳರು

SHOCKING: ಭೂ ಒತ್ತುವರಿ ವಿರೋಧಿಸಿದ ಮಹಿಳೆಯರನ್ನು ಮಣ್ಣಿನಲ್ಲಿ ಸೊಂಟದವರೆಗೆ ಹೂತು ಹಾಕಿದ ದುರುಳರು

ಭೋಪಾಲ್: ಭೂ ಒತ್ತುವರಿ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಮಹಿಳೆಯರನ್ನು ಮಣ್ಣಿನಲ್ಲಿ ಹೂತು ಹಾಕಿದ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆಯರನ್ನು ಮಣ್ಣಿನಲ್ಲಿ ಸೊಂಟದವರೆಗೆ ಹೂತು ಹಾಕಿ ದುರುಳರು ಕ್ರೌರ್ಯ ಮೆರೆದಿದ್ದಾರೆ.

ಮಮತಾ ಪಾಂಡೆ ಮತ್ತು ಆಶಾ ಪಾಂಡೆ ಅವರ ಕುಟುಂಬದ ಖಾಸಗಿ ಜಾಗದಲ್ಲಿ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದು, ಇದನ್ನು ವಿರೋಧಿಸಿದ್ದಕ್ಕೆ ಮಣ್ಣಿನಲ್ಲಿ ಹೂತು ಹಾಕಲಾಗಿದೆ. ತಮ್ಮ ಜಾಗದಲ್ಲಿ ರಸ್ತೆ ನಿರ್ಮಾಣ ವಿರೋಧಿಸಿ ಮಹಿಳೆಯರು ಪ್ರತಿಭಟನೆ ನಡೆಸಿದಾಗ ಟ್ರಕ್ ಚಾಲಕ ಮಹಿಳೆಯರ ಮೇಲೆಯೇ ಟ್ರಕ್ ಮೂಲಕ ಮಣ್ಣು ಸುರಿಸಿ ಹೂತು ಹಾಕಲು ಯತ್ನಿಸಿದ್ದಾನೆ. ಈ ವೇಳೆ ಅಲ್ಲಿದ್ದ ಇಬ್ಬರು ಮಹಿಳೆಯರನ್ನು ರಕ್ಷಿಸಿ ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆಯ ಬಗ್ಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular