2025-26ನೇ ಸಾಲಿನ ಹಿರಿಯೂರು ತಾಲ್ಲೂಕಿನ ತೋಟಗಾರಿಕೆ ಇಲಾಖೆ ವತಿಯಿಂದ ಹನಿ ನೀರಾವರಿ ಯೋಜನೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಯಂತ್ರೋಪಕರಣಗಳಿಗೆ ಸಹಾಯಧನ ಹಾಗೂ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಸಹಾಯಧನ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 15 ಅರ್ಜಿ ಸಲ್ಲಿಸಲು ಕೊನೆಯ ದಿನ.
ಈ ಯೋಜನೆಯಡಿ ಬಾಳೆ, ದಾಳಿಂಬೆ, ಪಪ್ಪಾಯ, ಬಿಡಿ ಹೂವು ಬೆಳೆಗಳನ್ನು ಹೊಸದಾಗಿ ಬೆಳೆಯಲು ಸಹಾಯಧನ ನೀಡಲಾಗುವುದು. ಸಂರಕ್ಷಿತ ಬೇಸಾಯ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆಗಳಿಗೆ ಪ್ಲಾಸ್ಟಿಕ್ ನೆಲಹೊದಿಕೆ, ವೈಯಕ್ತಿಕ ಕೃಷಿ ಹೊಂಡ, ಕೊಯ್ಲೋತ್ತರ ನಿರ್ವಹಣೆಯಡಿ ಈರುಳ್ಳಿ ಸಂಗ್ರಹಣಾ ಘಟಕ, ಸಣ್ಣ ಪ್ರಮಾಣದ ಅಣಬೆ ಬೆಳೆಸುವ ಘಟಕ ಹಾಗೂ ತೋಟಗಾರಿಕ ಯಾಂತ್ರೀಕರಣದಡಿ 20 ಹೆಚ್.ಪಿ ಒಳಗೆ ಟ್ರ್ಯಾಕ್ಟರ್ ಸಹಾಯಧನ ನೀಡಲಾಗುವುದು.
ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಹೊಸದಾಗಿ ನಾಟಿ ಮಾಡಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ರೈತರು ಹಿರಿಯೂರು ತೋಟಗಾರಿಕೆ ಇಲಾಖೆ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ 9731285946, 9449116976, 9113237153 ಗೆ ಸಂಪರ್ಕಿಸಬಹುದು ಎಂದು ಹಿರಿಯೂರು ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಕೆ.ಲೋಕೇಶ್ ತಿಳಿಸಿದ್ದಾರೆ.