ರೈತರೇ ಗಮನಿಸಿ : ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ


ಬಳ್ಳಾರಿ : ತೋಟಗಾರಿಕೆ ಇಲಾಖೆಯಿಂದ ಪ್ರಸ್ತಕ ಸಾಲಿಗೆ ವಿವಿಧ ಯೋಜನೆಗಳಡಿ ಸೌಲಭ್ಯಕ್ಕಾಗಿ ಅರ್ಹ ತೋಟಗಾರಿಕೆ ರೈತ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕೆಎಂಇಆರ್ಸಿ ಅಡಿ ಸಿಇಪಿಎಂಐಜೆಡ್ ಯೋಜನೆಯಡಿ ಸಂಡೂರು, ಬಳ್ಳಾರಿ ಮತ್ತು ಸಿರುಗುಪ್ಪ ತಾಲ್ಲೂಕುಗಳಲ್ಲಿ ಈರುಳ್ಳಿ ಶೇಖರಣೆ ಘಟಕ ಹಾಗೂ ಫಾರಂ ಗೇಟ್ ಘಟಕ ನಿರ್ಮಾಣಕ್ಕಾಗಿ ಸೌಲಭ್ಯ ನೀಡಲಾಗುತ್ತದೆ.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಮೇಗಾ ಮೈಕ್ರೋ ಆಗ್ರಿ-ಹಾರ್ಟಿ ಸಿಸ್ಟಮ್ ಕಾರ್ಯಕ್ರಮದಡಿ ಅನುಷ್ಠಾನಗೊಳಿಸಲಾಗುತ್ತಿರುವ ಮಾವು, ಸೀತಾಫಲ್, ಸೀಬೆ, ಗೇರು, ಹುಣಸೆ, ನೇರಳೆ ಮತ್ತು ಎಳೆನೀರು ತೆಂಗಿನಕಾಯಿ ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮ ಹಾಗೂ ಬೈಯೋಡೈಜಿಸ್ಟರ್ ಮತ್ತು ಅರಣ್ಯಬೆಳೆಗಳಾದ ಸಾಗುವಾನಿ, ಮಹಾಗನಿ, ಶ್ರೀಗಂಧ ಬೆಳೆಯಲು ಆಸಕ್ತ ರೈತರಿಂದ ಅರ್ಜಿ ಸಲ್ಲಿಸಬಹುದಾಗಿದೆ.

ತೋಟಗಾರಿಕೆ ರೈತ ಫಲಾನುಭವಿಗಳು ಆಯಾ ತಾಲ್ಲೂಕು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಿ, ಯೋಜನೆಗಳ ಮಾಹಿತಿ ಪಡೆದು ಅರ್ಜಿ ಸಲ್ಲಿಸಿ ಯೋಜನೆಯ ಕಾರ್ಯಕ್ರಮಗಳ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಹಾಗೂ ದೂ.08392-278179 ಗೆ ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read