ಶಿವಮೊಗ್ಗ : ತೋಟಗಾರಿಕೆ ಇಲಾಖೆಯು 2023-24ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ್ರದೇಶ ವಿಸ್ತರಣೆ (ಅಂಗಾಂಶಬಾಳೆ, ಹೈಬ್ರೀಡ್ ತರಕಾರಿ, ಕಾಳುಮೆಣಸು, ಗೇರು, ಕೋಕೋ, ಬಿಡಿಹೂ, ಗೆಡ್ಡೆ ಜಾತಿಯ ಹೂ ಮತ್ತು ಗುಲಾಬಿ), ಸಮುದಾಯ ಕೃಷಿಹೊಂಡ, ವೈಯುಕ್ತಿಕ ಕೃಷಿಹೊಂಡ, ಪ್ಯಾಕ್ ಹೌಸ್, ಪ್ರಾಥಮಿಕ ಸಂಸ್ಕರಣಾ ಘಟಕಗಳಿಗೆ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಅಥವಾ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಆಗಸ್ಟ್ 16 ರೊಳಗಾಗಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-295415 ಅಥವಾ ಆಯಾ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.