HomeKarnatakaಕ್ರೀಡಾಕೂಟದಲ್ಲಿ ವಿದ್ಯಾರ್ಥಿ ಎಸೆದ ಡಿಸ್ಕ್ ತಲೆಗೆ ಬಡಿದು ಶಿಕ್ಷಕನಿಗೆ ಗಂಭೀರ ಗಾಯ

ಕ್ರೀಡಾಕೂಟದಲ್ಲಿ ವಿದ್ಯಾರ್ಥಿ ಎಸೆದ ಡಿಸ್ಕ್ ತಲೆಗೆ ಬಡಿದು ಶಿಕ್ಷಕನಿಗೆ ಗಂಭೀರ ಗಾಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಸರ್ಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಬುಧವಾರ ನಡೆದ ಕ್ರೀಡಾಕೂಟದಲ್ಲಿ ಶಿಕ್ಷಕರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕ್ರೀಡಾಕೂಟದಲ್ಲಿ ವಿದ್ಯಾರ್ಥಿ ಎಸೆದ ಡಿಸ್ಕ್ ಶಿಕ್ಷಕರೊಬ್ಬರ ತಲೆಯ ಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ/ ರಿಪ್ಪನ್ ಪೇಟೆಯ ಮೇರಿ ಮಾತಾ ಶಾಲೆಯ ದೈಹಿಕ ಶಿಕ್ಷಕ ಕಮಲಾಕರ್ ಗಾಯಗೊಂಡವರು.

ಕ್ರೀಡಾಕೂಟದಲ್ಲಿ ಬುಧವಾರ ನಡೆದ 17 ವರ್ಷದೊಳಗಿನ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಡಿಸ್ಕಸ್ ಥ್ರೋ ವೇಳೆ ಡಿಸ್ಕ್ ಆಕಸ್ಮಿಕವಾಗಿ ಶಿಕ್ಷಕ ಕಮಲಾಕರ್ ಅವರ ತಲೆಗೆ ಬಡಿದಿದೆ. ಕ್ರೀಡಾಕೂಟ ನಡೆಯುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿ ಎಸೆದ ಡಿಸ್ಕಸ್ ಬೇರೊಂದು ಕ್ರೀಡೆ ಮುಗಿಸಿ ಬರುತ್ತಿದ್ದ ಶಿಕ್ಷಕ ಕಮಲಾಕರ್ ಅವರಿಗೆ ಆಕಸ್ಮಿಕವಾಗಿ ಬಡಿದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಲೆಗೆ ತೀವ್ರವಾದ ಪೆಟ್ಟು ಬಿದ್ದು ರಕ್ತಸ್ರಾವ ಆಗಿದ್ದು, ಅವರನ್ನು ಕೂಡಲೇ ಪಟ್ಟಣದ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಥಮ ಹಂತದ ಚಿಕಿತ್ಸೆ ಕೊಡಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ಕಳುಹಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular