HomeKarnatakaಲಾರಿ ಡಿಕ್ಕಿಯಾಗಿ ಅಪಘಾತ: ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವು

ಲಾರಿ ಡಿಕ್ಕಿಯಾಗಿ ಅಪಘಾತ: ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವು

ಬೆಂಗಳೂರು: ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಜಡಿಗೆನಹಳ್ಳಿ ಸಮೀಪ ಅಪಘಾತ ಸಂಭವಿಸಿದೆ. ಗಣಕನಹಳ್ಳಿ ನಿವಾಸಿಗಳಾದ ಮನೋಹರ(19), ಶ್ವೇತಾ(38), ಸುಕೃತಾ(4) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದ ಸ್ಥಳದಲ್ಲಿ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಹೊಸಕೋಟೆ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular