HomeKarnatakaಆಸ್ಪತ್ರೆಯಲ್ಲಿಯೇ ಮಗುವನ್ನು ಬಿಟ್ಟು ಹೋದ ತಾಯಿ

ಆಸ್ಪತ್ರೆಯಲ್ಲಿಯೇ ಮಗುವನ್ನು ಬಿಟ್ಟು ಹೋದ ತಾಯಿ

ಚಿಕ್ಕಬಳ್ಳಾಪುರ: ಸರ್ಕಾರಿ ಆಸ್ಪತ್ರೆಗೆ ಬಂದ ತಾಯಿಯೊಬ್ಬಳು ಹೆತ್ತ ಮಗುವನ್ನು ಬಿಟ್ಟು ಹೋಗಿರುವ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ ನಡೆದಿದೆ.

ಸರ್ಕಾರಿ ಹಾಗೂ ಮಕ್ಕಳ ಆಸ್ಪತ್ರೆಯಲ್ಲಿ ಒಂದುವರೆ ವರ್ಷದ ಮಗುವನ್ನು ಮಗು ನಿದ್ರಿಸಿದ್ದ ವೇಳೆ ತಾಯಿ ಬಿಟ್ಟು ಹೋಗಿದ್ದಾಳೆ. ಈ ದೃಶ್ಯ ಆಸ್ಪತ್ರೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಹಿಳೆ ಬುಧವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಮಗುವಿನೊಂದಿಗೆ ಆಸ್ಪತ್ರೆಗೆ ಬರುತ್ತಾಳೆ. ಹೀಗೆ ಬಂದ ಮಹಿಳೆ ನಿದ್ದೆ ಮಾಡುತಿದ್ದ ಮಗುವನ್ನು ಆಸ್ಪತ್ರೆಯಲ್ಲಿನ ತೊಟ್ಟಿಲಲ್ಲಿ ಇಟ್ಟು ಎಸ್ಕೇಪ್ ಆಗಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಲ ಹೊತ್ತಿನ ಬಳಿಕ ಮಗು ನಿದ್ದೆಯಿಂದ ಎದ್ದು ಅಳಲಾರಂಭಿಸಿದೆ. ಈ ವೇಳೆ ನರ್ಸ್ ಗಳು ಗಮನಿಸಿದ್ದು, ಮಗುವನ್ನು ಎತ್ತಿಕೊಂಡು ಸಮಾಧಾನ ಪಡಿಸಿದ್ದಾರೆ. ಮಗುವಿನ ಪೋಷಕರ ಪತ್ತೆಗಾಗಿ ಆಸ್ಪತ್ರೆಯ ಆಡಳಿತ ಮಂಡಳಿ ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದೆ.

 

For Latest News Updates, Join Our Whatsapp Community🚩
RELATED ARTICLES

Most Popular