HomeKarnatakaಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಕೋಲಾರ ಜಿಲ್ಲಾಸ್ಪತ್ರೆಯಿಂದ ಕಳುವಾಗಿದ್ದ ಮಗು ರಕ್ಷಣೆ,...

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಕೋಲಾರ ಜಿಲ್ಲಾಸ್ಪತ್ರೆಯಿಂದ ಕಳುವಾಗಿದ್ದ ಮಗು ರಕ್ಷಣೆ, ಮಹಿಳೆ ಅರೆಸ್ಟ್

ಕೋಲಾರ: ಕೋಲಾರ ಜಿಲ್ಲಾಸ್ಪತ್ರೆಯಿಂದ ಮಗು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಮಹಿಳಾ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮಗು ರಕ್ಷಣೆ ಮಾಡಿದ್ದಾರೆ.

ಕೋಲಾರ ಗಡಿ ಭಾಗದ ತಮಿಳುನಾಡಿನ ಬೇರಿಕೆ ಬಳಿ ಮಗುವಿನ ರಕ್ಷಣೆ ಮಾಡಲಾಗಿದೆ. ನಾಲ್ಕು ದಿನದ ಪುಟ್ಟ ಕಂದಮ್ಮ ತಾಯಿ ಮಡಿಲು ಸೇರಿದೆ. ಮಗು ಕಳ್ಳತನ ಮಾಡಿದ್ದ ಆರೋಪಿಗಳ ಪೈಕಿ ಓರ್ವ ಮಹಿಳೆ ಬಂಧಿಸಲಾಗಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಮಗುವನ್ನು ರಕ್ಷಣೆ ಮಾಡಿ ತಾಯಿ ಮಡಿಲಿಗೆ ಸೇರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೋಲಾರ ಜಿಲ್ಲಾ ಆಸ್ಪತ್ರೆಯಿಂದ ಮೂವರು ಮಹಿಳೆಯರು ನಿನ್ನೆ ಮಗು ಕಳ್ಳತನ ಮಾಡಿ ತಮಿಳುನಾಡಿಗೆ ಸಾಗಿಸುತ್ತಿದ್ದರು. ಕಳ್ಳರ ಜಾಡು ಹಿಡಿದ ಪೊಲೀಸರು ಮಗುವನ್ನು ರಕ್ಷಿಸಿದ್ದಾರೆ. ಓರ್ವ ಮಹಿಳೆಯನ್ನು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗಿದೆ. ಕೋಲಾರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular