HomeKarnatakaಆಸ್ಪತ್ರೆಗೆ ತೆರಳುವ ಮಾರ್ಗಮಧ್ಯದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಚಾಮರಾಜನಗರ: ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯದಲ್ಲಿ ಖಾಸಗಿ ವಾಹನದಲ್ಲಿಯೇ ಗರ್ಭಿಣಿ ಮಗುವಿಗೆ ಜನ್ಮ ನೀಡಿದ್ದಾರೆ.

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕಾಡಂಚಿನ ಗ್ರಾಮ ಒಂದರಲ್ಲಿ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯಲು ಸಕಾಲಕ್ಕೆ ಆಂಬುಲೆನ್ಸ್ ಸಿಗದಿದ್ದಾಗ ಖಾಸಗಿ ವಾಹನದಲ್ಲಿ ತೆರಳಿದ್ದಾರೆ. ಈ ವೇಳೆ ಹೆರಿಗೆಯಾಗಿದೆ.

ಹನೂರು ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮೇಗೌಡನಹಳ್ಳಿಯ ಮಾದೇಶ ಅವರ ಪತ್ನಿ ಜಡೆಸಿದ್ದಮ್ಮ ದಾರಿ ಮಧ್ಯೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಹೆರಿಗೆ ನೋವು ಕಾಣಿಸಿಕೊಂಡ ಕೂಡಲೇ 108 ಆಂಬುಲೆನ್ಸ್ ಗೆ ಮಾಹಿತಿ ನೀಡಲಾಗಿದೆ. ಆದರೆ ಸರಿಯಾದ ಸಮಯಕ್ಕೆ ಆಂಬುಲೆನ್ಸ್ ಸಿಗದ ಪರಿಣಾಮ ಆಶಾ ಕಾರ್ಯಕರ್ತೆ ಗ್ರಾಮದ ರಾಜೀವ್ ಅವರಿಗೆ ಮಾಹಿತಿ ನೀಡಿ ವಾಹನ ವ್ಯವಸ್ಥೆ ಮಾಡಲು ಕೋರಿದ್ದಾರೆ. ತಕ್ಷಣ ಅವರು ತಮ್ಮ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯದಲ್ಲಿಯೇ ಹೆರಿಗೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular