HomeLatest NewsBREAKING: ಆಸ್ಪತ್ರೆಯ ಆವರಣದಲ್ಲಿ ಮಾನವನ ತಲೆ ಬುರುಡೆ ಪತ್ತೆ: ಬೆಚ್ಚಿ ಬಿದ್ದ ಸಾರ್ವಜನಿಕರು

BREAKING: ಆಸ್ಪತ್ರೆಯ ಆವರಣದಲ್ಲಿ ಮಾನವನ ತಲೆ ಬುರುಡೆ ಪತ್ತೆ: ಬೆಚ್ಚಿ ಬಿದ್ದ ಸಾರ್ವಜನಿಕರು

ನೆಲಮಂಗಲ: ಆಸ್ಪತ್ರೆಯ ಆವರಣದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾನವನ ತಲೆಬುರುಡೆ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ.

ನೆಲಮಂಗಲದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಕಸದ ರಾಶಿ ಮೇಲೆ ತಲೆಬುರುಡೆ ಪತ್ತೆಯಾಗಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ. ಆಸ್ಪತ್ರೆ ಆವರಣದಲ್ಲಿ ಇದ್ದಕ್ಕಿದ್ದಂತೆ ತಲೆ ಬುರುಡೆ ಪತ್ತೆಯಾಗಿರುವುದು ವಾಮಾಚಾರದ ಶಂಕೆಯನ್ನು ಕೆಲವರು ವ್ಯಕ್ತಪಡಿಸಿದ್ದಾರೆ.

ಸ್ಥಳೀಯರಲ್ಲಿ ಹಾಗೂ ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದೆ. ಆಸ್ಪತ್ರೆಯ ವೈದ್ಯರು ಪೊಲೀಸರಿಗೆ ದೂರು ನೀಡಿದ್ದು, ಸ್ಥಳಕ್ಕಾಗಮಿಸ್ದ ಪೊಲೀಸರು ಪರಿಶೀಲನೆ ನಡೆಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular