HomeKarnatakaಇನ್ನು ವಸತಿ ಶಾಲೆ, ಹಾಸ್ಟೆಲ್ ಗಳಲ್ಲಿ ನಿತ್ಯ ನೀಡುವ ಊಟದ ವಿವರ ಸಾರ್ವಜನಿಕರಿಗೆ ಲಭ್ಯ

ಇನ್ನು ವಸತಿ ಶಾಲೆ, ಹಾಸ್ಟೆಲ್ ಗಳಲ್ಲಿ ನಿತ್ಯ ನೀಡುವ ಊಟದ ವಿವರ ಸಾರ್ವಜನಿಕರಿಗೆ ಲಭ್ಯ

ಚಾಮರಾಜನಗರ: ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳು, ವಸತಿ ಶಾಲೆಗಳಲ್ಲಿ ಪ್ರತಿದಿನ ವಿದ್ಯಾರ್ಥಿಗಳಿಗೆ ನೀಡುವ ಉಪಹಾರ ಹಾಗೂ ಊಟದ ವ್ಯವಸ್ಥೆಯನ್ನು ಸಾರ್ವಜನಿಕರು ಮುಕ್ತವಾಗಿ ವೀಕ್ಷಿಸಲು, ಪರಿಶೀಲಿಸಲು, ಸಲಹೆ ನೀಡುವ ವಿನೂತನ ವ್ಯವಸ್ಥೆಗೆ ಶನಿವಾರ ಚಾಲನೆ ನೀಡಲಾಗಿದೆ.

ವಿದ್ಯಾರ್ಥಿ ನಿಲಯಗಳು, ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರತಿದಿನ ನೀಡುತ್ತಿರುವ ತಿಂಡಿ, ಊಟದ ವಿವರಗಳನ್ನು ಅಪ್ಲೋಡ್ ಮಾಡಲಾಗುವುದು. ವಿದ್ಯಾರ್ಥಿ ನಿಲಯಗಳು ಮತ್ತು ವಸತಿ ಶಾಲೆಗಳಲಿ ನೀಡುವ ಬೆಳಗಿನ ತಿಂಡಿ, ಮಧ್ಯಾಹ್ನದ ಊಟ ಹಾಗೂ ರಾತ್ರಿ ಊಟದ ಫೋಟೋಗಳನ್ನು https://foodswdok.in/cr ವೆಬ್ಸೈಟ್ ನಲ್ಲಿ ಅಪ್ಲೋಡ್ ಮಾಡಲಿದ್ದು, ಪೋಷಕರು, ಸಾರ್ವಜನಿಕರು ವೀಕ್ಷಿಸಬಹುದಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular