HomeKarnatakaಹಾಸ್ಟೆಲ್ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು

ಹಾಸ್ಟೆಲ್ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು

ಬೆಂಗಳೂರು: ಹಾಸ್ಟೆಲ್ ವಿದ್ಯಾರ್ಥಿ ಕಟ್ಟಡದಿಂದ ಬಿದ್ದು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ದೊಡ್ಡಬಳ್ಳಾಪುರ ನಾಗದೇನಹಳ್ಳಿಯ ಗೀತಂ ವಿವಿಯಲ್ಲಿ ಘಟನೆ ನಡೆದಿದೆ.

ಆಂಧ್ರ ಪ್ರದೇಶ ಕರ್ನೂಲು ಮೂಲದ ದಾಸರಿ ಬ್ರಹ್ಮ ಸಾಯಿರೆಡ್ಡಿ ಮೃತಪಟ್ಟ ವಿದ್ಯಾರ್ಥಿ ಎಂದು ಹೇಳಲಾಗಿದೆ. ಗೀತಂ ವಿವಿಯ ಹಾಸ್ಟೆಲ್ ಕಟ್ಟಡದಿಂದ ಬಿದ್ದು ಸಾವನ್ನಪ್ಪಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನವೆಂಬರ್ ನಲ್ಲಿ ವಿದೇಶಿ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದರು. ಫೆಬ್ರವರಿ ತಿಂಗಳಲ್ಲಿ ರೈಲುಗೆ ಸಿಲುಕಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದರು. ಇದೀಗ ಹಾಸ್ಟೆಲ್ ನಿಂದ ಬಿದ್ದು ಇಂದ ಸಾಯಿರೆಡ್ಡಿ ಮೃತಪಟ್ಟಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular