ಕೊಪ್ಪಳ: ಕೊಪ್ಪಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಲಾಡ್ಜ್ ವೊಂದರಲ್ಲಿ ಹಾಸ್ಟೆಲ್ ವಾರ್ಡನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗದಗ ಜಿಲ್ಲೆಯ ಹನುಮೇಶ್ ಲಮಾಣಿ(39) ಆತ್ಮಹತ್ಯೆ ಮಾಡಿಕೊಂಡವರು. ಹಾಸ್ಟೆಲ್ ವಾರ್ಡನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅವರು ಭಾನುವಾರ ಕೊಪ್ಪಳದಲ್ಲಿನ ಲಾಡ್ಜ್ ಗೆ ಆಗಮಿಸಿದ್ದು, ಆನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೊಪ್ಪಳ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಕೊಪ್ಪಳ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.