ಹುಬ್ಬಳ್ಳಿ: ಕಾಲೇಜು ವಿದ್ಯಾರ್ಥಿಯೋರ್ವ ಅನುಮಾನಾಸ್ಪದ ರೀತಿಯಲ್ಲಿ ಹಾಸ್ಟೆಲ್ ನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿಯ ಬೈರಿಕೊಪ್ಪದಲ್ಲಿರುವ ಸನಾ ಕಾಲೇಜಿನ ಹಾಸ್ಟೆಲ್ ನ ಮೂರನೇ ಮಹಡಿಯ ಕೆಳಗೆ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ಅಯಾನ್ ಸುಂಕದ್ (19) ಮೃತ ವಿದ್ಯಾರ್ಥಿ. ಇಂದು ಬೆಳಿಗ್ಗೆ ಹಾಸ್ಟೆಲ್ ನ ಮೂರನೆ ಮಹಡಿಯ ಕೆಳಭಾಗದಲ್ಲಿ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿದ್ದಾನೆ.
ಕೊಪ್ಪಳ ಮೂಲದ ಅಯಾನ್ ಹುಬ್ಬಳ್ಳಿಯಲ್ಲಿ ಹಾಸ್ಟೆಲ್ ನಲ್ಲಿದ್ದುಕೊಂಡು ಓದುತ್ತಿದ್ದ. ವಿಜ್ಞಾನ ವಿಭಾಗದ ವಿದ್ಯಾರ್ಥಿಯಾಗಿದ್ದ ಎಂದು ತಿಳಿದುಬಂದಿದೆ. ಇದೀಗ ಇದ್ದಕ್ಕಿದ್ದಂತೆ ವಿದ್ಯಾರ್ಥಿ ಮೃತಪಟ್ಟಿದ್ದು, ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

