HomeKarnatakaರಾಜ್ಯದಲ್ಲಿ ಇಂದಿನಿಂದ ಬಿಸಿ ಗಾಳಿ: 17 ಜಿಲ್ಲೆಗಳಿಗೆ ‘ಶಾಖಾಘಾತ’ದ ಮುನ್ಸೂಚನೆ: ‘ಆರೆಂಜ್ ಅಲರ್ಟ್’

ರಾಜ್ಯದಲ್ಲಿ ಇಂದಿನಿಂದ ಬಿಸಿ ಗಾಳಿ: 17 ಜಿಲ್ಲೆಗಳಿಗೆ ‘ಶಾಖಾಘಾತ’ದ ಮುನ್ಸೂಚನೆ: ‘ಆರೆಂಜ್ ಅಲರ್ಟ್’

ಬೆಂಗಳೂರು: ರಾಜ್ಯದ ವಿವಿಧೆಡೆ ಸೋಮವಾರದಿಂದ ನಾಲ್ಕು ದಿನಗಳ ಕಾಲ ಬಿಸಿ ಗಾಳಿ ಹೆಚ್ಚಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ವತಿಯಿಂದ 17 ಜಿಲ್ಲೆಗಳಿಗೆ ಶಾಖಾಘಾತದ ಮುನ್ಸೂಚನೆ ನೀಡಲಾಗಿದೆ.

ರಾಜ್ಯದ ವಿಜಯಪುರ, ಯಾದಗಿರಿ, ರಾಯಚೂರು, ಕಲಬುರಗಿ, ಬೀದರ್, ಗದಗ, ಬೆಳಗಾವಿ, ಬಾಗಲಕೋಟೆ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಬಳ್ಳಾರಿ, ಕೊಪ್ಪಳ, ಹಾವೇರಿ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಮುಂದಿನ ಒಂದು ವಾರ ರಾಜ್ಯದಾದ್ಯಂತ ಒಣಹವೆ ಮುಂದುವರೆಯಲಿದ್ದು, ಮುಂದಿನ ಐದು ದಿನಗಳಲ್ಲಿ ಗರಿಷ್ಠ ತಾಪಮಾನ ಎರಡರಿಂದ ಮೂರು ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಮೇ 2ರವರೆಗೆ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿಸಿ ವಾತಾವರಣ ಇರುವ ಸಂಭವವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular