HomeKarnatakaBIG NEWS : ರಾಜ್ಯದ ಶಾಲೆಗಳಲ್ಲಿ ಬೇಸಿಗೆ ರಜೆಯಲ್ಲೂ ಬಿಸಿಯೂಟ : ರಾಜ್ಯ ಸರ್ಕಾರದಿಂದ ಮಹತ್ವದ...

BIG NEWS : ರಾಜ್ಯದ ಶಾಲೆಗಳಲ್ಲಿ ಬೇಸಿಗೆ ರಜೆಯಲ್ಲೂ ಬಿಸಿಯೂಟ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!

ಬೆಂಗಳೂರು : 2024-25ನೇ ಸಾಲಿನ ಏಪ್ರಿಲ್-ಮೇ 2024ರ 41 ದಿನಗಳ ಬೇಸಿಗೆ ರಜೆ ಅವಧಿಯಲ್ಲಿ ಬರಪೀಡಿತ ಎಂದು ಗುರುತಿಸಲಾಗಿರುವ ಒಟ್ಟು 31 ಜಿಲ್ಲೆಗಳಲ್ಲಿನ 223 ತಾಲ್ಲೂಕುಗಳಲ್ಲಿ 1-8ನೇ ತರಗತಿಯ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ಯೋಜನೆ ಅನುಷ್ಠಾನಗೊಳಿಸಿ ವಿತರಣೆ ಮಾಡಿರುವ ಸಂಬಂಧ ಅನುದಾನ ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

2024-25 ನೇ ಸಾಲಿನಲ್ಲಿ ಕೇಂದ್ರ ಪುರಸ್ಕೃತ ಯೋಜನೆಯಾದ ಪಿ.ಎಂ.ಪೋಷಣ್-ಮಧ್ಯಾಹ್ನ ಉಪಹಾರ ಯೋಜನೆಯಡಿ PAB ಅನುಮೋದನೆಯಂತೆ ಏಪ್ರಿಲ್-ಮೇ 2024ರ 41 ದಿನಗಳ ಬೇಸಿಗೆ ರಜೆ ಅವಧಿಯಲ್ಲಿ ಬರಪೀಡಿತ ಎಂದು ಗುರುತಿಸಲಾಗಿರುವ ಒಟ್ಟು 31 ಜಿಲ್ಲೆಗಳಲ್ಲಿನ 223 ತಾಲ್ಲೂಕುಗಳಲ್ಲಿ 1-8 ನೇ ತರಗತಿಯ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ಸಂಬಂಧಿಸಿದಂತೆ ಕೇಂದ್ರದ ಪಾಲಿನ ಅನುದಾನ ರೂ.2958.87 ಲಕ್ಷಗಳು ಸಂವಾದಿ ರಾಜ್ಯದ ಪಾಲಿನ ಅನುದಾನ ರೂ 1742.74 ಲಕ್ಷಗಳು ಹಾಗೂ ರಾಜ್ಯದ ಹೆಚ್ಚುವರಿ ಅನುದಾನ (Top-up) ರೂ.2692.17 ಲಕ್ಷಗಳು ಸೇರಿ ಒಟ್ಟಾರೆಯಾಗಿ ರೂ.7393.78 ಲಕ್ಷಗಳ ಅನುದಾನ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿರುತ್ತದೆ.

ಉಲ್ಲೇಖಿತ (3) ರ ಆದೇಶದಂತೆ ಜಿಲ್ಲಾ ಮತ್ತು ತಾಲ್ಲೂಕುವಾರು ಈಗಾಗಲೇ ಸಲ್ಲಿಸಿರುವ ಅನುದಾನ ಬೇಡಿಕೆ ಮತ್ತು ಹಂಚಿಕೆ ಪಟ್ಟಿಯಂತೆ ಲೆಕ್ಕ ಶೀರ್ಷಿಕವಾರು ಈ ಕಳಂಕಂಡಂತೆ ಅನುದಾನ ನಿಗದಿಪಡಿಸಿದ್ದು ಬಿಡುಗಡೆಗೊಳಿಸಿ ಬಳಸುವಂತೆ ಸೂಚಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular