HomeKarnatakaಮೇ 5ರವರೆಗೆ ರಾಜ್ಯಾದ್ಯಂತ ಉರಿ ಬಿಸಿಲು, ಉಷ್ಣ ಮಾರುತ ಆರ್ಭಟ

ಮೇ 5ರವರೆಗೆ ರಾಜ್ಯಾದ್ಯಂತ ಉರಿ ಬಿಸಿಲು, ಉಷ್ಣ ಮಾರುತ ಆರ್ಭಟ

ಬೆಂಗಳೂರು: ಮೇ 5ರವರೆಗೆ ರಾಜ್ಯಾದ್ಯಂತ ಉರಿ ಬಿಸಿಲು ಹೆಚ್ಚಳವಾಗಲಿದೆ. ಉಷ್ಣ ಮಾರುತದ ಆರ್ಭಟ ಇನ್ನೂ ಕೆಲವು ದಿನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಿಸಿಲ ತಾಪಕ್ಕೆ ನೀರಿನ ಹಾಹಾಕಾರ ಉಂಟಾಗಿದೆ. ಹಲವು ಕಡೆ ಜನ, ಜಾನುವಾರುಗಳಿಗೆ ನೀರಿಲ್ಲದೆ ತೊಂದರೆ ಎದುರಾಗಿದೆ. ಬಿಸಿಲಿನಿಂದ ಅನಾರೋಗ್ಯ ಬಾಧಿಸುತ್ತಿದೆ. ಮಳೆಯ ನಿರೀಕ್ಷೆಯಲ್ಲಿದ್ದ ರೈತರು ಸೇರಿದಂತೆ ಜನರಿಗೆ ನಿರಾಸೆಯಾಗಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ರಾಜ್ಯದಲ್ಲಿ ಸದ್ಯಕ್ಕೆ ಮಳೆಯಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಉಷ್ಣ ಮಾರುತದ ಆರ್ಭಟ ಮುಂದುವರೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜನ ಮನೆಯಿಂದ ಹೊರ ಬರದಂತಾಗಿದೆ. ಏಪ್ರಿಲ್ 30 ರಿಂದ ಮೇ 5ರವರೆಗೆ ಬೀದರ್, ವಿಜಯಪುರ, ಕಲಬುರಗಿ,  ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಕೊಪ್ಪಳ, ಹಾವೇರಿ, ಗದಗ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ತುಮಕೂರು, ಕೋಲಾರ, ಮಂಡ್ಯ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ.

ಏಪ್ರಿಲ್ 30 ರಿಂದ ಮೇ 3ರವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಅರ್ದ್ರತೆ ಸ್ಥಿತಿ ಹೆಚ್ಚಾಗುವ ಸಾಧ್ಯತೆ ಇದೆ. ತಾಪಮಾನ ಹೆಚ್ಚಳದಿಂದ ಜನರಲ್ಲಿ ಚರ್ಮ ವ್ಯಾಧಿ, ಮೈಗ್ರೇನ್, ಅತಿಸಾರ ವಾಂತಿಭೇದಿ, ತಲೆಸುತ್ತು ಮೊದಲಾದ ಕಾಯಿಲೆಗಳು ಕಾಣಿಸಿಕೊಳ್ಳುತ್ತಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular