ಜನಸಾಮಾನ್ಯರಿಗೆ ಶಾಕ್ ಮೇಲೆ ಶಾಕ್ : ಶೀಘ್ರವೇ ಹೋಟೆಲ್ ಊಟ, ತಿಂಡಿ ಬೆಲೆಯೂ ಹೆಚ್ಚಳ!

 

 

ಬೆಂಗಳೂರು : ಅಗತ್ಯ ವಸ್ತುಗಳ ಬೆಲೆಗಳ ಏರಿಕೆಯಾಗುತ್ತಿರುವ ನಡುವೆಯೇ ಜನಸಾಮಾನ್ಯರಿಗೆ ಮತ್ತೊಂದು ಶಾಕ್. ಶೀಘ್ರವೇ ಹೋಟೆಲ್ ಗಳಲ್ಲಿ ಊಟ, ತಿಂಡಿ ದರ ಏರಿಕೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಈಗಾಗಲೇ ವಿದ್ಯುತ್, ತರಕಾರಿ, ಅಕ್ಕಿ, ಬೇಳೆ ಕಾಳುಗಳ ಬೆಲೆಗಳು ಗಗನಕ್ಕೇರಿದ್ದು, ಹೊಟೇಲ್ ಉದ್ಯಮವನ್ನ ಸಂಕಷ್ಟಕ್ಕೆ ದೂಡಿದೆ. ಇದರ ಜೊತೆ ವಿದ್ಯುತ್, ಹಾಲಿನ ದರ ಏರಿಕೆ ಬರೆ ಮಾಲೀಕರನ್ನ ಕಂಗೆಡಿಸಿದೆ.ಹೀಗಾಗಿ ನಷ್ಟ ಸರಿದೂಗಿಸಲು ಅನಿವಾರ್ಯವಾಗಿ ಹೋಟೆಲ್ ಊಟ, ತಿಂಡಿ, ಟೀ,ಕಾಫಿ ಬೆಲೆಯಲ್ಲಿ ಏರಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದ್ದು,  ಈ ಬಾರಿಯ ಆಷಾಢ ಮುಗಿದ ಬೆನ್ನಲ್ಲೆ ಬೆಂಗಳೂರಿನಲ್ಲಿ ಹೊಟೇಲ್ ದರ ಏರಿಕೆಯಾಗಲಿದೆ ಎನ್ನಲಾಗಿದೆ.

ಯಾವ ತಿಂಡಿ ಎಷ್ಟು ಏರಿಕೆ?

ಅನ್ನ ಸಾಂಬಾರ್ – 30 ರೂ.ಇದ್ದದ್ದು, 40ರೂ.ವರೆಗೆ ಏರಿಕೆ ಮಾಡುವ ಸಾಧ್ಯತೆ ಇದ್ದು, ಫುಲ್ ಊಟ 50 ರೂ. ಇದ್ದದ್ದು 70 ರೂ.ವರೆಗೆ ಏರಿಕೆ ಮಾಡಲು ಹೋಟೆಲ್ ಮಾಲೀಕರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಮಸಾಲೆ ದೋಸೆ- 60 ರೂ, ಉದ್ದಿನವಡೆ 12- 15 ರೂ, ಪೂರಿ 45-50 ರೂ, ಪೂಳಿಯೊಗರೆ 40-50 ರೂ.ವರೆಗೆ, ಇಡ್ಲಿ ವಡೆ 30-50 ರೂ.ವರೆಗೆ, ಬಿಸಿ ಬೇಳೆಬಾತ್ 35- 40ರೂ, ರೈಸ್ ಬಾತ್ 35-40 ರೂ.ಟೀ, ಕಾಫಿ 12- 15ರೂ. ವರೆಗೆ ಏರಿಕೆ ಮಾಡಲು ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read