HomeLatest Newsರಾಜ್ಯದ ಹೋಟೆಲ್ ಮಾಲೀಕರೇ ಗಮನಿಸಿ : 'ಕಮರ್ಷಿಯಲ್ ಗ್ಯಾಸ್ ಸಿಲಿಂಡರ್' ಬೇಕಿದ್ದರೆ ಜಸ್ಟ್ ಹೀಗೆ...

ರಾಜ್ಯದ ಹೋಟೆಲ್ ಮಾಲೀಕರೇ ಗಮನಿಸಿ : ‘ಕಮರ್ಷಿಯಲ್ ಗ್ಯಾಸ್ ಸಿಲಿಂಡರ್’ ಬೇಕಿದ್ದರೆ ಜಸ್ಟ್ ಹೀಗೆ ಮಾಡಿ

ಬೆಂಗಳೂರು : ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಎದುರಾಗಿದ್ದ ವಾಣಿಜ್ಯ ಬಳಕೆ ಎಲ್‌ಪಿಜಿ (Commercial LPG) ಸಿಲಿಂಡರ್‌ಗಳ ಕೊರತೆಯನ್ನು ನೀಗಿಸಲು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಅವರು ಮಹತ್ವದ ಕ್ರಮಗಳನ್ನು ಪ್ರಕಟಿಸಿದ್ದಾರೆ.

ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್‌ಗಳ ಅಭಾವ ಇರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಮಾರುಕಟ್ಟೆಗೆ ವಾಣಿಜ್ಯ ಎಲ್‌ಪಿಜಿ ಪೂರೈಕೆಯನ್ನು ಶೇಕಡಾ 20 ರಷ್ಟು ಹೆಚ್ಚಿಸಲು ತೈಲ ಕಂಪನಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಗೇಲ್ (GAIL) ನೋಂದಣಿ ಕಡ್ಡಾಯ : ಎಲ್‌ಪಿಜಿ ಪೂರೈಕೆಯಲ್ಲಿ ಪಾರದರ್ಶಕತೆ ತರಲು ಮತ್ತು ಕೃತಕ ಅಭಾವ ತಡೆಯಲು ಪೂರೈಕೆದಾರರು ಮತ್ತು ವಿತರಕರು ಗೇಲ್ ಇಂಡಿಯಾ ಲಿಮಿಟೆಡ್‌ನಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ  ಎಂದು ಅವರು ಹೇಳಿದ್ದಾರೆ.ವಾಣಿಜ್ಯ ಸಿಲಿಂಡರ್ ಕೊರತೆಯಿಂದಾಗಿ ಹೋಟೆಲ್, ರೆಸ್ಟೋರೆಂಟ್ ಮತ್ತು ಸಣ್ಣ ಕೈಗಾರಿಕೆಗಳು ಸಂಕಷ್ಟಕ್ಕೆ ಸಿಲುಕಿದ್ದವು. ಸರ್ಕಾರದ ಈ ನಿರ್ಧಾರದಿಂದಾಗಿ ಹೋಟೆಲ್ ಮಾಲೀಕರಿಗೆ ದೊಡ್ಡ ಮಟ್ಟದ ರಿಲೀಫ್ ಸಿಕ್ಕಂತಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಂದು ವಾರದ ಗಡುವು : ರಿಜಿಸ್ಟರ್ ಆಗದಿದ್ದರೆ ನೋ ಗ್ಯಾಸ್!

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ಪಾರದರ್ಶಕತೆ ತರಲು ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ. ಸಚಿವರು ನೀಡಿದ ಪ್ರಮುಖ ಸೂಚನೆಗಳು ಇಲ್ಲಿವೆ:

  • ಒಂದು ವಾರದ ಸಮಯ: ರಾಜ್ಯದ ಎಲ್ಲಾ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ವಾಣಿಜ್ಯ ಉದ್ದೇಶಕ್ಕೆ ಗ್ಯಾಸ್ ಬಳಸುವ ಎಲ್ಲಾ ಸಂಸ್ಥೆಗಳು ಒಂದು ವಾರದೊಳಗೆ ಗೇಲ್ (GAIL) ಸಂಸ್ಥೆಯಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ.
  • ನೋಂದಣಿ ಇಲ್ಲದಿದ್ದರೆ ಸಿಲಿಂಡರ್ ಇಲ್ಲ: “ಗೇಲ್‌ನಲ್ಲಿ ರಿಜಿಸ್ಟರ್ ಆಗದ ಸಂಸ್ಥೆಗಳಿಗೆ ಇನ್ನು ಮುಂದೆ ವಾಣಿಜ್ಯ ಸಿಲಿಂಡರ್‌ಗಳನ್ನು ವಿತರಿಸಲಾಗುವುದಿಲ್ಲ” ಎಂದು ಸಭೆಯಲ್ಲಿ ಸ್ಪಷ್ಟವಾಗಿ ಎಚ್ಚರಿಸಲಾಗಿದೆ.
  • ದುರುಪಯೋಗಕ್ಕೆ ಬ್ರೇಕ್: ನೋಂದಣಿ ಪ್ರಕ್ರಿಯೆಯಿಂದಾಗಿ ಸಿಲಿಂಡರ್‌ಗಳನ್ನು ಯಾರು ಖರೀದಿಸುತ್ತಿದ್ದಾರೆ ಮತ್ತು ಎಲ್ಲಿ ಬಳಕೆಯಾಗುತ್ತಿದೆ ಎಂಬ ನಿಖರ ಮಾಹಿತಿ ಲಭ್ಯವಾಗಲಿದೆ. ಇದು ಅಕ್ರಮ ದಾಸ್ತಾನು ಮತ್ತು ಗೃಹ ಬಳಕೆ ಸಿಲಿಂಡರ್‌ಗಳ ದುರುಪಯೋಗವನ್ನು ತಡೆಯಲು ಸಹಕಾರಿಯಾಗಲಿದೆ.

ಗೃಹ ಬಳಕೆ ಸಿಲಿಂಡರ್ ದುರುಪಯೋಗಕ್ಕೆ ಬ್ರೇಕ್ : ವಾಣಿಜ್ಯ ಸಿಲಿಂಡರ್ ಕೊರತೆಯ ನೆಪದಲ್ಲಿ ಗೃಹ ಬಳಕೆ (Domestic) ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿರುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.

ಸಚಿವರ ಹೇಳಿಕೆ: “ರಾಜ್ಯದಲ್ಲಿ ಎಲ್‌ಪಿಜಿ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ನಾವು ಕ್ರಮ ಕೈಗೊಂಡಿದ್ದೇವೆ. ಹೆಚ್ಚುವರಿ ಪೂರೈಕೆಯಿಂದಾಗಿ ಮುಂದಿನ ಕೆಲವು ದಿನಗಳಲ್ಲಿ ಪರಿಸ್ಥಿತಿ ತಿಳಿಯಾಗಲಿದೆ” ಎಂದು ಮುನಿಯಪ್ಪ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular