HomeKarnatakaಅಕ್ರಮ ಮದ್ಯ ಸೇವನೆಗೆ ಅವಕಾಶ ನೀಡಿದ್ದ ಡಾಬಾ, ಹೋಟೆಲ್‌ಗಳ ಮೇಲೆ ಅಬಕಾರಿ ದಾಳಿ – 7...

ಅಕ್ರಮ ಮದ್ಯ ಸೇವನೆಗೆ ಅವಕಾಶ ನೀಡಿದ್ದ ಡಾಬಾ, ಹೋಟೆಲ್‌ಗಳ ಮೇಲೆ ಅಬಕಾರಿ ದಾಳಿ – 7 ಪ್ರಕರಣ ದಾಖಲು

ಶಿವಮೊಗ್ಗ :   ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಮದ್ಯ ಸೇವನೆ ಮಾಡಲು ಅವಕಾಶ ಮಾಡಿಕೊಡುತ್ತಿದ್ದ ಡಾಬಾ ಹಾಗೂ ಮಾಂಸಾಹಾರಿ ಹೋಟೆಲ್‌ಗಳ ಮೇಲೆ ಅಬಕಾರಿ ಇಲಾಖೆಯು ಸಾಮೂಹಿಕ ದಾಳಿ ನಡೆಸಿ, 7 ಪ್ರಕರಣಗಳನ್ನು ದಾಖಲಿಸಿಕೊಂಡಿದೆ.

 ಶಿವಮೊಗ್ಗ ಜಿಲ್ಲೆಯ ಅಬಕಾರಿ ಉಪ ಆಯುಕ್ತರಾದ ಡಾ. ಕೆ.ಎಸ್. ಮುರಳಿ ಅವರ ಮಾರ್ಗದರ್ಶನದಲ್ಲಿ, ಅಬಕಾರಿ ಉಪ ಅಧೀಕ್ಷಕರಾದ ನೌಷಾದ್ ಅಹಮ್ಮದ್ ಖಾನ್ ಹೆಚ್ (ಶಿವಮೊಗ್ಗ ಉಪ ವಿಭಾಗ) ಹಾಗೂ ಶೀಲಾ ಧಾರಜ್ಕರ್ (ಸಾಗರ ಉಪ ವಿಭಾಗ) ಅವರ ನೇತೃತ್ವದಲ್ಲಿ ಜಿಲ್ಲೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಈ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.

 ಶಿವಮೊಗ್ಗ ಮತ್ತು ತೀರ್ಥಹಳ್ಳಿ ತಾಲೂಕಿನ ಗಾಜನೂರು, ಸಕ್ರೆಬೈಲು ಹಾಗೂ ಮಂಡಗದ್ದೆ ಗ್ರಾಮಗಳ ವ್ಯಾಪ್ತಿಯಲ್ಲಿರುವ ಡಾಬಾ ಮತ್ತು ಮಾಂಸಾಹಾರಿ ಹೋಟೆಲ್‌ಗಳ ಮೇಲೆ ಸಾಮೂಹಿಕ ದಾಳಿ ನಡೆಸಲಾಗಿದೆ. ಈ ವೇಳೆ ಗ್ರಾಹಕರಿಗೆ ಅಕ್ರಮವಾಗಿ ಮದ್ಯಪಾನ ಮಾಡಲು ಅವಕಾಶ ನೀಡಿದ್ದ ಹೋಟೆಲ್ ಹಾಗೂ ಡಾಬಾ ಮಾಲೀಕರ ವಿರುದ್ಧ ಕರ್ನಾಟಕ ಅಬಕಾರಿ ಕಾಯ್ದೆ-1965 ರ ಕಲಂ-15(ಎ) ಮತ್ತು 32(3) ರ ಅಡಿಯಲ್ಲಿ ಒಟ್ಟು 07 ಮೊಕದ್ದಮೆಗಳನ್ನು ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಮುಂದೆ ಯಾವುದೇ ಡಾಬಾ ಅಥವಾ ಮಾಂಸಾಹಾರಿ ಹೋಟೆಲ್‌ಗಳಲ್ಲಿ ಗ್ರಾಹಕರಿಗೆ ಅಕ್ರಮವಾಗಿ ಮದ್ಯ ಸೇವಿಸಲು ಅವಕಾಶ ನೀಡಬಾರದೆಂದು ಅಬಕಾರಿ ಇಲಾಖೆಯು ಮಾಲೀಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ ಎಂದು ಅಬಕಾರಿ ಉಪ ಆಯುಕ್ತ ಡಾ.ಕೆ.ಎಸ್.ಮುರಳಿ ತಿಳಿಸಿದ್ದಾರೆ.

 ತೀರ್ಥಹಳ್ಳಿ; ಮೆಸ್ಕಾಂ ಜನ ಸಂಪರ್ಕ ಸಭೆ

ತೀರ್ಥಹಳ್ಳಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ದಿನಾಂಕ 16.10.2026 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ;.9448289508 ನ್ನು ಸಂಪರ್ಕಿಸಬಹುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

 ವಸತಿ ನಿಲಯಗಳ ನೋಂದಣಿಗೆ ಆನ್‌ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ ಜಿಲ್ಲೆಯಲ್ಲಿ 6 ರಿಂದ 18 ವರ್ಷದೊಳಗಿನ ಮಕ್ಕಳಿಗಾಗಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ನಿಲಯಗಳ ನೋಂದಣಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅನ್ವಯಿಸುವ ವಸತಿ ನಿಲಯಗಳು: ಸರ್ಕಾರಿ, ಸರ್ಕಾರೇತರ, ನಾಗರಿಕ ಸಮಾಜ ಸಂಸ್ಥೆಗಳು, ಟ್ರಸ್ಟ್, ಧಾರ್ಮಿಕ, ಖಾಸಗಿ ಹಾಗೂ ವೈಯಕ್ತಿಕವಾಗಿ ನಡೆಸಲ್ಪಡುವ ಯಾವುದೇ ಔಪಚಾರಿಕ ಮತ್ತು ಅನೌಪಚಾರಿಕ ಶೈಕ್ಷಣಿಕ ವಸತಿ ನಿಲಯಗಳಿಗೆ (ಸ್ಟ್ಯಾಂಡ್-ಅಲೋನ್ ಹಾಸ್ಟೆಲ್‌ಗಳು, ಶಿಕ್ಷಣ ಸಂಸ್ಥೆಗಳ ವಸತಿ ನಿಲಯಗಳು ಮತ್ತು ವಸತಿ ಶಾಲೆಗಳು) ಈ ನಿಯಮ ಅನ್ವಯಿಸುತ್ತದೆ.

ಅಧಿಕೃತ ವೆಬ್‌ಸೈಟ್ https://shivamogga.nic.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಸಂಬಂಧಿತ ಕಚೇರಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಮಾರ್ಗಸೂಚಿಯನ್ವಯ 31/10/2026 ರೊಳಗೆ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.

ಈ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯಲು ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಮೊಗ್ಗ ಇವರನ್ನು ಅಥವಾ ದೂರವಾಣಿ ಸಂಖ್ಯೆ 08182-295514 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.

 

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular