ಮನೆ ಇಲ್ಲದವರಿಗೆ ಗುಡ್ ನ್ಯೂಸ್: 5 ಲಕ್ಷ ರೂ. ಸಹಾಯಧನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಮನೆ ಇಲ್ಲದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿದವರು ಒಂಟಿ ಮನೆ ನಿರ್ಮಿಸಿಕೊಳ್ಳಲು 5 ಲಕ್ಷ ರೂಪಾಯಿ ಸಹಾಯಧನ ನೀಡಲಾಗುವುದು.

ಈ ಯೋಜನೆಯ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಅವಧಿಯನ್ನು ಜನವರಿ 20ರವರೆಗೆ ಬಿಬಿಎಂಪಿ ವಿಸ್ತರಿಸಿದೆ. ಸಹಾಯಧನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ 18 ಕೊನೆಯ ದಿನಾಂಕವಾಗಿತ್ತು. ಅರ್ಜಿದಾರರು ಈ ಅವಧಿಯಲ್ಲಿ ಸಮರ್ಪಕವಾಗಿ ಅರ್ಜಿ ಸಲ್ಲಿಸಲು ಸಾಧ್ಯವಾಗಿರದ ಕಾರಣ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ.

http://welfare.bbmpgov.in ವೆಬ್ಸೈಟ್ ನಲ್ಲಿ ಅಥವಾ ಬೆಂಗಳೂರು ಒನ್ ಕೇಂದ್ರದಲ್ಲಿ 30 ರೂಪಾಯಿ ಶುಲ್ಕ ಪಾವತಿಸಿ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅಲ್ಲದೆ ಬಿಬಿಎಂಪಿ ಎಲ್ಲ ವಲಯಗಳ ಜಂಟಿ ಆಯುಕ್ತರ ಕಚೇರಿಗಳಲ್ಲಿ ಸ್ಥಾಪಿಸಿದ ಸಹಾಯ ಕೇಂದ್ರಗಳಲ್ಲಿಯೂ ಒಂಟಿ ಮನೆ ಯೋಜನೆ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹೇಳಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read