HomeIndiaಸ್ವಂತ ಮನೆ ನಿರೀಕ್ಷೆಯಲ್ಲಿದ್ದ ಬಡವರು, ಮಧ್ಯಮ ವರ್ಗದವರಿಗೆ ಗುಡ್ ನ್ಯೂಸ್: ಒಂದು ಕೋಟಿ ಮನೆ ನಿರ್ಮಾಣ...

ಸ್ವಂತ ಮನೆ ನಿರೀಕ್ಷೆಯಲ್ಲಿದ್ದ ಬಡವರು, ಮಧ್ಯಮ ವರ್ಗದವರಿಗೆ ಗುಡ್ ನ್ಯೂಸ್: ಒಂದು ಕೋಟಿ ಮನೆ ನಿರ್ಮಾಣ ಯೋಜನೆ ಘೋಷಣೆ

ನವದೆಹಲಿ: ಕೇಂದ್ರ ಬಜೆಟ್ ನಲ್ಲಿ ನಗರ ಪ್ರದೇಶಗಳಲ್ಲಿನ ಒಂದು ಕೋಟಿ ಬಡ ಹಾಗೂ ಮಧ್ಯಮ ವರ್ಗದವರಿಗೆ ಮನೆ ನಿರ್ಮಾಣಕ್ಕೆ ಪ್ರಧಾನಮಂತ್ರಿ ಆವಾಸ್ ಯೋಜನೆ 2.0 ಅಡಿಯಲ್ಲಿ ನೆರವು ನೀಡುವುದಾಗಿ ಘೋಷಿಸಲಾಗಿದೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ನಲ್ಲಿ 5 ವರ್ಷಗಳಲ್ಲಿ ಯೋಜನೆ ಪೂರ್ಣಗೊಳಿಸುವ ಗುರಿ ಹಾಕಿಕೊಳ್ಳಲಾಗಿದೆ. ಇದಕ್ಕೆ 10 ಲಕ್ಷ ಕೋಟಿ ರೂಪಾಯಿ ವೆಚ್ಚವಾಗುವ ನಿರೀಕ್ಷೆ ಇದೆ. ಈ ಯೋಜನೆಗೆ ಕೇಂದ್ರ ಸರ್ಕಾರ 2.2 ಲಕ್ಷ ಕೋಟಿ ರೂ. ನೆರವು ನೀಡುವುದಾಗಿ ತಿಳಿಸಿದ್ದಾರೆ. ಈ ಮನೆಗಳ ಮೇಲಿನ ಸಾಲದ ಬಡ್ಡಿಗೆ ಸಬ್ಸಿಡಿ ಒದಗಿಸುವುದಾಗಿ ಪ್ರಸ್ತಾಪಿಸಿದ್ದಾರೆ.

ಕಾರ್ಖಾನೆಗಳಲ್ಲಿ ಕೆಲಸ ಮಾಡುವ ನೌಕರರಿಗೆ ಅನುಕೂಲವಾಗುವಂತೆ ಡಾರ್ಮಿಟರಿ ಶೈಲಿಯ ಬಾಡಿಗೆ ಮನೆ ನಿರ್ಮಾಣಕ್ಕೆ ನೆರವು ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಯೋಜನೆಯನ್ನು ಪಿಪಿಪಿ ಮಾದರಿಯಲ್ಲಿ ಕೈಗೊಳ್ಳಲಾಗುವುದು. ಮನೆ ಮಾಲೀಕರು ತಮ್ಮ ಮನೆಗಳನ್ನು ಬಾಡಿಗೆ ನೀಡಿ ಆದರಿಂದ ಗಳಿಸುವ ಆದಾಯಕ್ಕೆ ವ್ಯವಹಾರದ, ವೃತ್ತಿಯ ಲಾಭಗಳು ಅಡಿಯಲ್ಲಿ ತೆರಿಗೆ ಹಾಕುವುದಿಲ್ಲ. ಮನೆ ಆಸ್ತಿ ಮೇಲಿನ ತೆರಿಗೆ ಅಡಿಯಲ್ಲಿ ತೆರಿಗೆ ಸಂಗ್ರಹಿಸುವುದಾಗಿ ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular