HomeKarnatakaಮನೆ, ಕಟ್ಟಡ ನಿರ್ಮಿಸುವವರಿಗೆ ಗುಡ್ ನ್ಯೂಸ್: ಇನ್ನು ಸುಲಭವಾಗಿ ಯೋಗ್ಯ ದರದಲ್ಲಿ ಮರಳು ಲಭ್ಯ

ಮನೆ, ಕಟ್ಟಡ ನಿರ್ಮಿಸುವವರಿಗೆ ಗುಡ್ ನ್ಯೂಸ್: ಇನ್ನು ಸುಲಭವಾಗಿ ಯೋಗ್ಯ ದರದಲ್ಲಿ ಮರಳು ಲಭ್ಯ

ಬೆಂಗಳೂರು: ಮರಳು ನೀತಿ ಗೊಂದಲ ನಿವಾರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಮಾಹಿತಿ ನೀಡಲಾಗಿದೆ.

ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಯೋಗ್ಯ ದರದಲ್ಲಿ ಮರಳನ್ನು ಒದಗಿಸುವ ಉದ್ದೇಶದಿಂದ ಮರಳು ನೀತಿ ಅನುಷ್ಠಾನದಲ್ಲಿರುವ ಗೊಂದಲಗಳ ನಿವಾರಣೆಗೆ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರು ಮತ್ತು ಸರ್ಕಾರಿ ಕಾಮಗಾರಿಗಳಿಗೆ ನಿಗದಿತ ಬೆಲೆಯಲ್ಲಿ ಮರಳು ಲಭ್ಯವಾಗಿಸಲು ಹೊಸ ಮರಳು ನೀತಿ -2020 ಅನ್ನು ಅನುಮೋದಿಸಲಾಗಿದೆ ಎಂದು ಉಲ್ಲೇಖಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರದ ಎಲ್ಲಾ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ಮರಳು ನೀತಿ ಜಾರಿಗೊಳಿಸಲಾಗುವುದು. ಗೊಂದಲ ನಿವಾರಿಸಿ ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಯೋಗ್ಯ ದರದಲ್ಲಿ ಮರಳನ್ನು ಒದಗಿಸಲಾಗುವುದು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular