HomeKarnatakaಸಿಡಿಲು ಬಡಿದು ಮನೆಗೆ ಬೆಂಕಿ: 10 ಲಕ್ಷ ರೂ. ನಗದು, ಚಿನ್ನಾಭರಣ ಸೇರಿ ಅಪಾರ ಪ್ರಮಾಣದ...

ಸಿಡಿಲು ಬಡಿದು ಮನೆಗೆ ಬೆಂಕಿ: 10 ಲಕ್ಷ ರೂ. ನಗದು, ಚಿನ್ನಾಭರಣ ಸೇರಿ ಅಪಾರ ಪ್ರಮಾಣದ ಆಸ್ತಿ ಸುಟ್ಟು ಕರಕಲು

ಹಾಸನ: ಸಿಡಿಲಿನಿಂದ ಮನೆಗೆ ಬೆಂಕಿ ತಗುಲಿ ಮನೆಯಲ್ಲಿದ್ದ 10 ಲಕ್ಷ ರೂ. ನಗದು ಚಿನ್ನಾಭರಣ ಸೇರಿದಂತೆ ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಸುಟ್ಟು ಕರಕಲಾದ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಚಿಕ್ಕೂರು ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.

ಚಿಕ್ಕೂರು ಗ್ರಾಮದ ರಫೀಕ್ ಅವರಿಗೆ ಸೇರಿದ ಮನೆಯಲ್ಲಿ ಅವಘಡ ಸಂಭವಿಸಿದೆ. ಗುರುವಾರ ಸಂಜೆ ಅರಸೀಕೆರೆ ಭಾಗದಲ್ಲಿ ಭಾರಿ ಸಿಡಿಲು ಗುಡುಗು ಸಹಿತ ಮಳೆಯಾಗಿದೆ. ಚಿಕ್ಕೂರು ಗ್ರಾಮದ ರಫೀಕ್ ಅವರ ಮನೆಗೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಇಡೀ ಮನೆಗೆ ವ್ಯಾಪಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಮನೆಯಲ್ಲಿದ್ದ ವಸ್ತುಗಳು, ಅಪಾರ ಪ್ರಮಾಣದ ಆಸ್ತಿಪಾಸ್ತಿ ಸುಟ್ಟು ಕರಕಲಾಗಿವೆ. (ಚಿತ್ರಕೃಪೆ: ಎಐ)

ರಾಜ್ಯದ ವಿವಿಧೆಡೆ ಮಳೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗುರುವಾರ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಉತ್ತಮ ಹಿಂಗಾರು ಮಳೆಯಾಗಿದೆ. ಚಿಕ್ಕಮಗಳೂರಿನ ತರೀಕೆರೆ, ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ಸಾಗರ ಭಾಗದಲ್ಲಿ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗಿದೆ. ಮಂಗಳೂರು ನಗರ, ಕಡಬ, ಪುತ್ತೂರು, ಬೆಳ್ತಂಗಡಿ, ಸುಳ್ಯ ಭಾಗದಲ್ಲಿಯೂ ಮಳೆಯಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular