ಹಾಸನ: ಸಿಡಿಲಿನಿಂದ ಮನೆಗೆ ಬೆಂಕಿ ತಗುಲಿ ಮನೆಯಲ್ಲಿದ್ದ 10 ಲಕ್ಷ ರೂ. ನಗದು ಚಿನ್ನಾಭರಣ ಸೇರಿದಂತೆ ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಸುಟ್ಟು ಕರಕಲಾದ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಚಿಕ್ಕೂರು ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.
ಚಿಕ್ಕೂರು ಗ್ರಾಮದ ರಫೀಕ್ ಅವರಿಗೆ ಸೇರಿದ ಮನೆಯಲ್ಲಿ ಅವಘಡ ಸಂಭವಿಸಿದೆ. ಗುರುವಾರ ಸಂಜೆ ಅರಸೀಕೆರೆ ಭಾಗದಲ್ಲಿ ಭಾರಿ ಸಿಡಿಲು ಗುಡುಗು ಸಹಿತ ಮಳೆಯಾಗಿದೆ. ಚಿಕ್ಕೂರು ಗ್ರಾಮದ ರಫೀಕ್ ಅವರ ಮನೆಗೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಇಡೀ ಮನೆಗೆ ವ್ಯಾಪಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಮನೆಯಲ್ಲಿದ್ದ ವಸ್ತುಗಳು, ಅಪಾರ ಪ್ರಮಾಣದ ಆಸ್ತಿಪಾಸ್ತಿ ಸುಟ್ಟು ಕರಕಲಾಗಿವೆ. (ಚಿತ್ರಕೃಪೆ: ಎಐ)
ರಾಜ್ಯದ ವಿವಿಧೆಡೆ ಮಳೆ
ಗುರುವಾರ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಉತ್ತಮ ಹಿಂಗಾರು ಮಳೆಯಾಗಿದೆ. ಚಿಕ್ಕಮಗಳೂರಿನ ತರೀಕೆರೆ, ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ಸಾಗರ ಭಾಗದಲ್ಲಿ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗಿದೆ. ಮಂಗಳೂರು ನಗರ, ಕಡಬ, ಪುತ್ತೂರು, ಬೆಳ್ತಂಗಡಿ, ಸುಳ್ಯ ಭಾಗದಲ್ಲಿಯೂ ಮಳೆಯಾಗಿದೆ.
ಶ್ರೀ ಹಾಸನಾಂಬ ದೇವಿ ದರ್ಶನಕ್ಕೆ ಭಕ್ತಾದಿಗಳು ಆಗಮಿಸಲು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ
ಹಾಸನ: ಶ್ರೀ ಹಾಸನಾಂಬ ದೇವಿ ದರ್ಶನಕ್ಕೆ ಭಕ್ತಾದಿಗಳು ಆಗಮಿಸಲು ಅನುಕೂಲವಾಗುವಂತೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಸಂಸದ ಶ್ರೇಯಸ್ ಎಂ ಪಟೇಲ್ ಅವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ಬೆಂಗಳೂರು ಹಾಸನ್ ಎಕ್ಸ್ ಪ್ರೆಸ್ ವಿಶೇಷ ರೈಲು ಬೆಂಗಳೂರಿನಿAದ ಬೆಳಗ್ಗೆ 7.30 ಹೊರಟು ಹಾಸನಕ್ಕೆ ಬೆಳಗ್ಗೆ 11.30 ತಲುಪಲಿದೆ, ನಂತರ ಮಧ್ಯಾಹ್ನ 3 .15ಕ್ಕೆ ಹಾಸನದಿಂದ ಹೊರಟು ಸಂಜೆ 7.00 ಗಂಟೆ ತಲುಪಲಿದೆ. ಈ ರೈಲು ಮಾರ್ಗ ಮಧ್ಯ ಯಶವಂತಪುರ, ನೆಲಮಂಗಲ, ಕುಣಿಗಲ್, ಯಡಿಯೂರು, ಬಿಜಿ ನಗರ. ಶ್ರವಣಬೆಳಗೂಳ, ಚನ್ನರಾಯಪಟ್ಟಣ ನಿಲ್ದಾಣದಲ್ಲಿ ನಿಲುಗಡೆ ಹೊಂದಿರುತ್ತದೆ ಎಂದರು
ಅರಸೀಕೆರೆಯಿಂದ ಬೆಳಗ್ಗೆ 11.30 ಹೊರಟು ಹಾಸನಕ್ಕೆ 12.30 ತಲುಪಲಿದೆ, ಹಬ್ಬನಘಟ್ಟ ಹಾಗೂ ಬಾಗೇಶಪುರ ನಿಲ್ದಾಣಗಳಲ್ಲಿ ರೈಲು ನಿಲುಗಡೆಗೆ ಅವಕಾಶವಿರುತ್ತದೆ ನಂತರ ಹಾಸನದಿಂದ 12.45 ಹೊರಟು ಮಧ್ಯಾಹ್ನ 2 ಗಂಟೆಗೆ ಅರಸೀಕೆರೆ ತಲುಪಲಿದೆ ಎಂದರು.
ಹಾಸನಾಂಬ ದೇವಿಯ ದರ್ಶನಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಅನುಕೂಲವಾಗುವಂತೆ ಸಾರಿಗೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಈ ವಿಶೇಷ ರೈಲುಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ ಬೆಂಗಳೂರು, ಅರಸೀಕೆರೆ ಹಾಗೂ ಮಾರ್ಗ ಮಧ್ಯದ ವಿವಿಧ ಪ್ರದೇಶಗಳಿಂದ ಹಾಸನಕ್ಕೆ ಆಗಮಿಸುವ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದ ಅವರು ಪ್ರಯಾಣಿಕರು ಪ್ರಯಾಣ ಆರಂಭಿಸುವ ಮೊದಲು ನೈರುತ್ಯ ರೈಲ್ವೆಯ ಅಧಿಕೃತ ಮೂಲಗಳಿಂದ ರೈಲುಗಳ ವೇಳಾ ಪಟ್ಟಿ ಹಾಗೂ ಸಂಚಾರದ ಮಾಹಿತಿಯನ್ನು ಖಚಿತಪಡಿಸಿಕೊಳ್ಳುವಂತೆ ತಿಳಿಸಿದರು.
ರೈಲ್ವೆ ನಿಲ್ದಾಣದಲ್ಲಿ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಶೌಚಾಲಯಗಳು ಸ್ವಚ್ಚವಾಗಿರಬೇಕು, ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ರೈಲ್ವೆ ನಿಲ್ದಾಣದಲ್ಲಿ ಹೆಲ್ಪ್ ಡೆಸ್ಕ್, ಭಕ್ತಾದಿಗಳು ದೇವಿ ದರ್ಶನಕ್ಕೆ ರೂ.300, 1000 ರೂ.ಗಳ ಟಿಕೆಟ್ ಪಡೆಯಲು ಪ್ರತ್ಯೇಕ ಕೌಂಟರ್ ಇರುತ್ತದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಜಾತ್ರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ಉಚಿತ ವೈಫೈ ಬಿಡುಗಡೆ ಮಾಡಿ ಮಾತನಾಡಿದ ಅವರು ಹಾಸನಾಂಬ ದೇವಿ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಹೆಚ್ಚಿನ ಜನಸಂದಣಿಯಿಂದ ಇಂಟರ್ನೆಟ್ ಸಮಸ್ಯೆ ಎದುರಾಗುವುದರಿಂದ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸಂಸದರ ಅನುದಾನದಲ್ಲಿ ಉಚಿತ ವೈಫೈ ಸೌಲಭ್ಯವನ್ನು ಅ.29 ರಿಂದ ನ.11 ರವರೆಗೆ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಲತಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತಾ, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ರೈಲ್ವೆ ಇಲಾಖೆ ಅಸಿಸ್ಟೆಂಟ್ ಮ್ಯಾನೇಜರ್ ರಮೇಶ್, ಚಂದ್ರೇಗೌಡ ಮತ್ತಿತರರು ಉಪಸ್ಥಿತರಿದ್ದರು.

