HomeKarnatakaBIG NEWS: ಮನೆ ಮೇಲ್ಛಾವಣಿ ಕುಸಿದು ಬಿದ್ದು ವ್ಯಕ್ತಿ ಸ್ಥಳದಲ್ಲೇ ಸಾವು

BIG NEWS: ಮನೆ ಮೇಲ್ಛಾವಣಿ ಕುಸಿದು ಬಿದ್ದು ವ್ಯಕ್ತಿ ಸ್ಥಳದಲ್ಲೇ ಸಾವು

ಚಿತ್ರದುರ್ಗ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣಾರ್ಭಟಕ್ಕೆ ಮನೆ ಗೋಡೆ ಕುಸಿದು ಬಿದ್ದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಚಿತ್ರದುರ್ಗದಲ್ಲಿಯೂ ಅಂತದ್ದೇ ಘಟನೆ ನಡೆದಿದೆ. ಮನೆ ಮೇಲ್ಛಾವಣಿ ಕುಸಿದು ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರಾಮಜೋಗಿನಹಳ್ಳಿಯಲ್ಲಿ ಈ ದುರಂತ ಸಂಭವಿಸಿದೆ. ರಾಮಜೋಗಿನಹಳ್ಳಿ ನಿವಾಸಿ 45 ವರ್ಷದ ಮುರಳೀಧರ ಮೃತ ದುರ್ದೈವಿ.

ಹಳೇ ಮನೆ ದುರಸ್ತಿ ಮಾಡುತ್ತಿದ್ದ ವೇಳೆ ಏಕಾಏಕಿ ಮನೆಯ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಮುರಳೀಧರ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular