ಬಡವರಿಗೆ ಗುಡ್ ನ್ಯೂಸ್: ತಿಂಗಳಾಂತ್ಯಕ್ಕೆ ಮೂಲಸೌಕರ್ಯ ಸಹಿತ ಉತ್ತಮ ಗುಣಮಟ್ಟದ ಮನೆ ವಿತರಣೆ: ಸಚಿವ ಜಮೀರ್ ಅಹಮದ್ ಸೂಚನೆ

ಬೆಂಗಳೂರು:  ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಬಡ ಕುಟುಂಬದವರಿಗೆ ನಿರ್ಮಿಸಿಕೊಡುತ್ತಿರುವ ಮನೆಗಳ ಗುಣಮಟ್ಟ ಉತ್ತಮವಾಗಿರಬೇಕು ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಂಗಳಾಂತ್ಯದಲ್ಲಿ 36,000 ಮನೆ ಹಂಚಿಕೆ ಮಾಡಲಿರುವ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಚಿವರು ಪ್ರಗತಿ ಪರಿಶೀಲನೆ ನಡೆಸಿದ್ದು, ಗುಣಮಟ್ಟದ ಮನೆಗಳನ್ನು ಮೂಲಸೌಕರ್ಯ ಸಹಿತ ಎಲ್ಲಾ ಕಾಮಗಾರಿಯೊಂದಿಗೆ ನಿಗದಿತ ಅವಧಿ ಒಳಗೆ ಪೂರ್ಣಗೊಳಿಸಬೇಕು ಎಂದು ಹೇಳಿದ್ದಾರೆ.

ಏಕಕಾಲದಲ್ಲಿ ರಾಜ್ಯದೆಲ್ಲೆಡೆ ಮನೆಗಳ ಹಂಚಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಅದೇ ದಿನ ಫಲಾನುಭವಿಗಳಿಗೆ ಬೀಗ ನೀಡಬೇಕು. ಕುಡಿಯುವ ನೀರು, ಒಳಚರಂಡಿ, ವಿದ್ಯುತ್ ಸಂಪರ್ಕ ಸಹಿತ ಎಲ್ಲಾ ಕಾಮಗಾರಿಗಳನ್ನು ಫೆಬ್ರವರಿ 20ರೊಳಗೆ ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read