ಮನೆ ಇಲ್ಲದ ಬಡವರಿಗೆ ಗುಡ್ ನ್ಯೂಸ್: ಕಾಲಮಿತಿಯೊಳಗೆ ವಸತಿ ಯೋಜನೆ ಪೂರ್ಣಗೊಳಿಸಲು ಗಡುವು

ಬೆಂಗಳೂರು: ಕಾಲಮಿತಿಯೊಳಗೆ ವಸತಿ ಯೋಜನೆ ಪೂರ್ಣಗೊಳಿಸುವಂತೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಗಡುವು ನೀಡಿದ್ದಾರೆ.

ಗೃಹ ಮಂಡಳಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ರಾಜೀವ್ ಗಾಂಧಿ ವಸತಿ ನಿಗಮದಿಂದ ರಾಜ್ಯದಲ್ಲಿ ಕೈಗೊಂಡ ವಸತಿ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ನಿಗಮದಿಂದ 47,882 ಕುಟುಂಬಗಳಿಗೆ ವಸತಿ ಕಲ್ಪಿಸುವ 42 ಯೋಜನೆ ಕೈಗೊಳ್ಳಲಾಗಿದೆ. ಆದರೆ 4665 ಮನೆಗಳು ಮಾತ್ರ ಪೂರ್ಣಗೊಂಡಿವೆ ಎಂಬ ಮಾಹಿತಿ ಪಡೆದ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಮಗಾರಿಯ ಪ್ರಗತಿ ವರದಿ ಸಲ್ಲಿಸಿ ಅನುದಾನ ಕೊರತೆ ಅಥವಾ ಬೇರೆ ಸಮಸ್ಯೆ ಇದ್ದರೆ ತಿಳಿಸಿ ಎಂದು ಸಚಿವರು ತಾಕೀತು ಮಾಡಿದ್ದಾರೆ. ಕೆಲಸ ಪೂರ್ಣವಾಗದಿದ್ದರೂ ಕೆಲವೆಡೆ ಹಣ ಬಿಡುಗಡೆಯಾಗಿದ್ದು, ಇನ್ನೂ ಮುಂದೆ ಈ ರೀತಿ ಪ್ರಮಾದ ಆಗದಂತೆ ಎಚ್ಚರಿಕೆ ವಹಿಸಬೇಕು. ಫಲಾನುಭವಿಗಳ ವಂತಿಗೆ ಪಡೆದುಕೊಳ್ಳದೆ, ಬ್ಯಾಂಕ್ ಸಾಲದ ಖಾತರಿ ಇಲ್ಲದೆ ಹಂಚಿಕೆ ಪತ್ರ ನೀಡುವಂತಿಲ್ಲ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಅವರ ಒಂದು ಲಕ್ಷ ಮನೆ ಯೋಜನೆ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು. ಒಂದು ತಿಂಗಳಲ್ಲಿ 12 ಸಾವಿರ ಮನೆ ಹಂಚಿಕೆಗೆ ಫಲಾನುಭವಿಗಳಿಗೆ ಸಾಲ ವ್ಯವಸ್ಥೆ ಮಾಡಿಸಿ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಬೀಗ ಹಸ್ತಾಂತರಕ್ಕೆ ಸಿದ್ಧತೆ ಮಾಡಿಕೊಳ್ಳಿ ಎಂದು ಸೂಚನೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read