ಬೆಳಗಾವಿ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ಜ್ಯೋತಿ ನಗರದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಬಂಧಿಸಲಾಗಿದೆ.
ಶ್ರೀನಿಧಿ ನಾವಿ(28) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಶ್ರೀನಿಧಿ ಮತ್ತು ಸಂತೋಷ್ ನಾವಿ 2021 ರಲ್ಲಿ ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ದಂಪತಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಕೌಟುಂಬಿಕ ಕಲಹ, ಕಿರುಕುಳಕ್ಕೆ ಬೇಸತ್ತು ಶ್ರೀನಿಧಿ ಮನೆಯ ಮೊದಲ ಮಹಡಿಯಲ್ಲಿ ಕಿಟಕಿಯ ಗ್ರಿಲ್ ಗೆ ವೇಲ್ ನಿಂದ ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ತವರು ಮನೆಯವರೊಂದಿಗೆ ಮಾತನಾಡದಂತೆ ಪತಿ ಮೊಬೈಲ್ ಕಸಿದುಕೊಂಡಿದ್ದ ಎಂದು ಮೃತರ ಕುಟುಂಬದವರು ಆರೋಪಿಸಿದ್ದಾರೆ. ಪತಿ, ಅತ್ತೆ ಮತ್ತು ಇನ್ನಿಬ್ಬರು ಸಂಬಂಧಿಕರ ವಿರುದ್ಧ ಶ್ರೀನಿಧಿ ಕುಟುಂಬದವರು ವರದಕ್ಷಿಣೆ ಕಿರುಕುಳ ದೂರು ನೀಡಿದ್ದು, ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

