ಬೆಂಗಳೂರು : ಬೆಂಗಳೂರಿನಲ್ಲಿ ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಪತಿಯೇ ಕೊಲೆ ಮಾಡಿದ್ದಾನೆ ಎಂದು ಮೃತ ಮಹಿಳೆಯ ಪೋಷಕರು ಆರೋಪಿಸಿದ್ದಾರೆ.
2 ವರ್ಷದ ಹಿಂದೆ ಎಡ್ವಿನ್ ಹಾಗೂ ಮಣಿ ಮದುವೆಯಾಗಿದ್ದರು. ದಂಪತಿಗಳಿಗೆ ಒಂದು ಮಗು ಕೂಡ ಇತ್ತು. ಆದರೆ ಇದ್ದಕ್ಕಿದ್ದಂತೆ ಎಡ್ವಿನ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.
ಅಳಿಯನೇ ನನ್ನ ಮಗಳನ್ನ ಕೊಂದಿದ್ದಾನೆ ಎಂದು ಮಹಿಳೆ ಕುಟುಂಬದವರು ಆರೋಪಿಸಿದ್ದಾರೆ. ಎಡ್ವಿನ್ ಕೈ ಬಳೆ ಪುಡಿ ಪುಡಿಯಾಗಿದ್ದು, ಗಾಯದ ಗುರುತು ಕೂಡ ಇದೆ. ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
