HomeKarnatakaBREAKING: ಪತಿ ಮನೆಯವರಿಂದ ವರದಕ್ಷಿಣೆ ಕಿರುಕುಳ: ಗೃಹಿಣಿ ಆತ್ಮಹತ್ಯೆ

BREAKING: ಪತಿ ಮನೆಯವರಿಂದ ವರದಕ್ಷಿಣೆ ಕಿರುಕುಳ: ಗೃಹಿಣಿ ಆತ್ಮಹತ್ಯೆ

ಮೈಸೂರು: ವರದಕ್ಷಿಣೆಗಾಗಿ ಪತಿ ಮತ್ತು ಆತನ ಮನೆಯವರ ಕಿರುಕುಳದಿಂದ ಮನನೊಂದು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಸಿಂಡೇನಹಳ್ಳಿಯಲ್ಲಿ ನಡೆದಿದೆ.

ನೇಣು ಬಿಗಿದುಕೊಂಡು 25 ವರ್ಷದ ರೇಷ್ಮಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರತಿದಿನ ಕುಡಿದು ಬಂದು ಪತಿ ಶ್ರೀನಿವಾಸ್ ಜಗಳವಾಡುತ್ತಿದ್ದ. ಆರು ವರ್ಷಗಳ ಹಿಂದೆ ಶ್ರೀನಿವಾಸನ ಜೊತೆಗೆ ರೇಷ್ಮಾ ಮದುವೆಯಾಗಿತ್ತು.

ಈರಯ್ಯನ ಕೊಪ್ಪಲು ನಿವಾಸಿ ಚಂದ್ರೇಗೌಡ, ಶಾಂತಮ್ಮ ದಂಪತಿಯ ಪುತ್ರಿ ರೇಷ್ಮಾ ಸಾವಿಗೆ ಪತಿ ಶ್ರೀನಿವಾಸ್ ಮತ್ತು ಆತನ ಸಹೋದರ ಶ್ರೀಧರ್, ಮಾವ ಮಾದೇಗೌಡ, ಅತ್ತೆ ಸರಸಮ್ಮ ಕಾರಣ ಎಂದು ಆರೋಪಿಸಿ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular