ಹಾವೇರಿ: ಬಡವರಿಗೆ ಕಡಿಮೆ ದರದಲ್ಲಿ, ಕಡುಬಡವರಿಗೆ ಉಚಿತವಾಗಿ ನಿವೇಶನ ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಗೃಹ ಮಂಡಳಿ ನೂತನ ಅಧ್ಯಕ್ಷ ಹಾಗೂ ಶಾಸಕ ಶ್ರೀನಿವಾಸ ಮಾನೆ ಹೇಳಿದ್ದಾರೆ.
ಹಾನಗಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ ಬಡವರಿಗೆ ಕಡಿಮೆ ದರದಲ್ಲಿ ನಿವೇಶನ ನೀಡಲಾಗುವುದು. ಕಡುಬಡವರಿಗೆ ಉಚಿತವಾಗಿ ನಿವೇಶನ ಯೋಜನೆ ಆರಂಭವಾಗಲಿದೆ ಎಂದು ಹೇಳಿದ್ದಾರೆ.
ಆರು ತಿಂಗಳಲ್ಲಿ 72,000 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಂಡಿದ್ದೇವೆ. ಜನಸಾಮಾನ್ಯರ ಸಮಸ್ಯೆಗಳನ್ನು ಈಡೇರಿಸಲು ಬದ್ಧರಾಗಿದ್ದೇವೆ. ದೆಹಲಿಯಲ್ಲಿ ನಮ್ಮ ರಾಜ್ಯದ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ಕರ್ನಾಟಕ ಭವನ ಆರಂಭಿಸಲಾಗಿದ್ದು, ಸಮರ್ಥ ಸಮೃದ್ಧ ಭಾರತ ನಿರ್ಮಾಣಕ್ಕೆ ನಮ್ಮ ಆದ್ಯತೆ ಎಂದು ಹೇಳಿದ್ದಾರೆ.

