HomeLatest NewsBREAKING : ವಸತಿ ಇಲಾಖೆಯ ವಿರುದ್ಧ ಮತ್ತೊಂದು ಆರೋಪ : ಸಿಎಂ ಸಿದ್ದರಾಮಯ್ಯಗೆ ದೂರು ಸಲ್ಲಿಕೆ.!

BREAKING : ವಸತಿ ಇಲಾಖೆಯ ವಿರುದ್ಧ ಮತ್ತೊಂದು ಆರೋಪ : ಸಿಎಂ ಸಿದ್ದರಾಮಯ್ಯಗೆ ದೂರು ಸಲ್ಲಿಕೆ.!

ಬೆಂಗಳೂರು: ವಸತಿ ಇಲಾಖೆಗಳ ಮನೆಗಳಿಗೆ ಹಣ ಪಡೆದು ಹಂಚಿಕೆ ಮಾಡಲಾಗುತ್ತಿದೆ ಎಂದು ಶಾಸಕ ಬಿ.ಆರ್.ಪಾಟೀಲ್ ಮಾಡಿರುವ ಆರೋಪ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಗಿರುವ ಬೆನ್ನಲ್ಲೇ ವಸತಿ ಇಲಾಖೆಯ ಬಗ್ಗೆ ಮತ್ತೊಂದು ಆರೋಪ ಕೇಳಿಬಂದಿದೆ.

ವಸತಿ ಇಲಾಖೆಯ ಅಧಿಕಾರಿಗಳು ಕಮಿಷನ್ ಗಾಗಿ ಪ್ಯಾಕೇಜ್ ಟೆಂಡರ್ ಗಳನ್ನು ತಮಗೆ ಬೇಕಾದವರಿಗೆ ನೀಡುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ಮರಿಲಿಂಗೇಗೌಡ ಪಾಟಿಲ್, ರಾಜೀವ್ ಗಾಂಧಿ ವಸತಿ ನಿಗಮದ ಎಂಡಿ ಪರಶುರಾಮ್ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರಿಗೆ ದೂರು ನೀಡಿದ್ದಾರೆ.

ವಸತಿ ಯೋಜನೆಗಳನ್ನು ಪ್ಯಾಕೇಜ್ ಟೆಂಡರ್ ಮಾಡುವಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟವಾಗಿ ಹೇಳಿದ್ದಾರೆ. ಹೀಗಿದ್ದರೂ ತಮಗೆ ಬೇಕಾದವರಿಗೆ ಟೆಂಡರ್ ನೀಡಲು ಸಿಎಂ ಆದೇಶವನ್ನೇ ಅಧಿಕಾರಿಗಳು ಧಿಕ್ಕರಿಸಿದ್ದಾರೆ. ಈ ಮೂಲಕ ಕಮಿಷನ್ ಆಸೆಗಾಗಿ ನಿಯಮ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೊಪ್ಪಳ, ಬಳ್ಳಾರಿ, ಗದಗ, ಧಾರವಾಡ, ಶಿವಮೊಗ್ಗ, ಹಾಸನ, ಉತ್ತರಕನ್ನಡ, ದಕ್ಷಿಣ ಕನ್ನಡ, ತುಮಕೂರು ಮತ್ತು ಮೈಸೂರು, ಕೊಡಗು, ಹಾಗೂ ಬೆಂಗಳೂರು ಗ್ರಾಮಾಂತರ, ಯಾದಗಿರಿ, ರಾಯಚೂರು, ಕಲಬುರಗಿ, ಹಾಗೂ ಬೀದರ್ ಹೀಗೆ ಎರಡು ಅಥವಾ ಮೂರು ಜಿಲ್ಲೆಗಳ ಕಾಮಗಾರಿಗಳನ್ನು ಸೇರಿಸಿ ಪ್ಯಾಕೇಜ್ ಮಾಡಿ ಟೆಂಡರ್ ನೀಡಲಾಗಿದೆ. ಇದರಿಂದಾಗಿ ಗುತ್ತಿಗೆದಾರರಿಗೆ ಅನ್ಯಾಯವಾಗಿದೆ. ಟೆಂಡರ್ ವಾಪಸ್ ಪಡೆಯುವಂತೆ ಮರಿಲಿಂಗೇಗೌಡ ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular