‘ನವದೆಹಲಿ : ‘ನರೇಂದ್ರ ಮೋದಿ ‘ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕೇಂದ್ರದ ಸಾಲ ಎಷ್ಟಾಗಿದೆ ? ಎಂದು ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ.
ಸಾಲದ ಬಗ್ಗೆ ಮಾತನಾಡುವ ವಿಜಯೇಂದ್ರ ಅವರು ನರೇಂದ್ರ ಮೋದಿಯವರ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕೇಂದ್ರದ ಸಾಲ ಎಷ್ಟಾಗಿದೆ? ರಾಜ್ಯಗಳ ಸಾಲ ಎಷ್ಟಾಗಿದೆ ಎಂಬುದನ್ನು ತಿಳಿದುಕೊಂಡರೆ ಒಳ್ಳೆಯದು. 2013-14 ರಲ್ಲಿ 53.11 ಲಕ್ಷ ಕೋಟಿ ರೂಗಳಷ್ಟಿದ್ದ ಕೇಂದ್ರದ ಸಾಲ ನಿರ್ಮಲಾ ಸೀತಾರಾಮನ್ ಅವರೇ ಈ ಬಜೆಟ್ ನಲ್ಲಿ ಘೋಷಿಸಿರುವಂತೆ 2026 ರ ಮಾರ್ಚ್ ವೇಳೆಗೆ 200.16 ಲಕ್ಷ ಕೋಟಿಗಳಷ್ಟಾಗುತ್ತಿದೆ. ಅದನ್ನೂ ಮೀರಬಹುದು. 11 ವರ್ಷಗಳಲ್ಲಿ 147 ಲಕ್ಷ ಕೋಟಿಗಳಿಗೂ ಹೆಚ್ಚಿನ ಸಾಲವನ್ನು ಮೋದಿ ಸರ್ಕಾರ ಮಾಡಿದೆ. ಇಷ್ಟು ಬೃಹತ್ ಮೊತ್ತದ ಸಾಲ ಯಾಕಾಯಿತು?
ನರೇಂದ್ರ ಮೋದಿಯವರ ಆರ್ಥಿಕ ನೀತಿಗಳಿಂದ ರಾಜ್ಯಗಳ ಆರ್ಥಿಕ ಸ್ಥಿತಿಯೂ ಅಯೋಮಯವಾಗಿದೆ. 2014 ರ ಮಾರ್ಚ್ ಅಂತ್ಯಕ್ಕೆ ದೇಶದ ಎಲ್ಲ ರಾಜ್ಯಗಳ ಸಾಲ 25 ಲಕ್ಷ ಕೋಟಿ ರೂ. ಇದ್ದದ್ದು ಈಗ 95 ಲಕ್ಷ ಕೋಟಿ ರೂ.ಗಳಿಗೂ ಮೀರಿದೆ. ಕಳೆದ 10 ವರ್ಷಗಳಲ್ಲಿ ರಾಜ್ಯಗಳ ಸಾಲ 70 ಲಕ್ಷ ಕೋಟಿಗಳಷ್ಟು ಹೆಚ್ಚಾಗಿದೆ. ಮೋದಿ ಸರ್ಕಾರದ ಆರ್ಥಿಕ ನೀತಿಗಳಿಂದ ರಾಜ್ಯಗಳೂ ತ್ರಾಸ ಪಡುತ್ತಿವೆ. ಕೇಂದ್ರದ ಆರ್ಥಿಕತೆಯೂ ದುರ್ಬಲವಾಗುತ್ತಿದೆ. ಮತ್ತೊಮ್ಮೆ ತಿಳಿಸಬಯಸುವುದೇನೆಂದರೆ ನಮ್ಮ ರಾಜ್ಯದ ಆರ್ಥಿಕತೆ ಬಿಜೆಪಿಯ ದ್ರೋಹವನ್ನು ಮೆಟ್ಟಿ ನಿಲ್ಲುವಷ್ಟು ಸದೃಢವಾಗಿದೆ. ನಾವು ದೆಹಲಿಯ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರವು ಮಾಡುತ್ತಿರುವ ದ್ರೋಹದ ವಿರುದ್ಧ ನಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುತ್ತೇವೆ. ಇಷ್ಟರ ನಡುವೆಯೂ ನಾವು ನುಡಿದಂತೆ ನಡೆಯುತ್ತೇವೆ, ನಮ್ಮ ಜನರ ಜೊತೆ ನಿಲ್ಲುತ್ತೇವೆ. ರಾಜ್ಯದ ವಿರೋಧ ಪಕ್ಷದವರು ಸುಳ್ಳು ಹೇಳುವುದನ್ನು ನಿಲ್ಲಿಸಿ ಕರ್ನಾಟಕದ ಜನರ ಕಲ್ಯಾಣಕ್ಕಾಗಿ ಸರ್ಕಾರವು ನಡೆಸುತ್ತಿರುವ ಹೋರಾಟದಲ್ಲಿ ಜೊತೆಯಾಗಬೇಕೆಂದು ಮನವಿ ಮಾಡುತ್ತೇನೆ ಎಂದಿದ್ದಾರೆ.
ನಮ್ಮ ಆರ್ಥಿಕತೆ ಚೆನ್ನಾಗಿದೆ, ನಮ್ಮ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂಬ ಕಾರಣಕ್ಕೆ ಇತ್ತೀಚೆಗೆ ನಡೆದ ಇನ್‌ವೆಸ್ಟ್ ಕರ್ನಾಟಕ ಕಾರ್ಯಕ್ರಮದಲ್ಲಿ 10.27 ಲಕ್ಷ ಕೋಟಿಗಳಿಗೂ ಹೆಚ್ಚಿನ ಮೊತ್ತದ ಬಂಡವಾಳ ಹೂಡಿಕೆಗಳಿಗೆ ಒಪ್ಪಂದಗಳಾಗಿವೆ. ಇದನ್ನೆಲ್ಲ ಗಮನಿಸಿಯೆ ರಾಜಕೀಯ ಕಾರಣಗಳಿಂದ ಬಿಜೆಪಿಯವರು ರಾಜ್ಯದ ಆರ್ಥಿಕ ಸ್ಥಿತಿಗತಿಗಳ ಕುರಿತು ಟೀಕೆಗಳನ್ನು ಮಾಡುತ್ತಿದ್ದಾರೆ.
ರಾಜ್ಯದ ಆರ್ಥಿಕತೆಯ ಬಗ್ಗೆ ಮಾತನಾಡುವ@BSBommai ಮತ್ತು ಬಿಜೆಪಿಯವರು ಕೇಂದ್ರದ ಬಜೆಟನ್ನು ಸರಿಯಾಗಿ ಓದಿದ್ದಾರೆಯೆ?2024-25 ರ ಮೂಲ ಬಜೆಟ್ಟಿನ ಅಂದಾಜು 48.21 ಲಕ್ಷ ಕೋಟಿಗಳಷ್ಟಿತ್ತು. ಆದರೆ ಅದನ್ನು ಪರಿಷ್ಕರಿಸಿ 47.16 ಲಕ್ಷ ಕೋಟಿ ರೂ.ಗಳಿಗೆ ಇಳಿಸಿದ್ದು ಯಾಕೆ? ಆಯವ್ಯಯದ ಅಂದಾಜಿಗೂ ಪರಿಷ್ಕೃತ ಅಂದಾಜಿಗೂ 1,04,025 ಕೋಟಿಗಳಷ್ಟು ಕಡಿಮೆಯಾಗಲು ಕಾರಣವೇನು? ಬಂಡವಾಳ ವೆಚ್ಚವನ್ನು 92,682 ಕೋಟಿ ಕಡಿಮೆ ಮಾಡಲಾಗಿದೆ. ಅದೂ ಹೋಗಲಿ 2024-25 ರ ಮೂಲ ಅಂದಾಜಿಗೆ ಹೋಲಿಸಿದರೆ 2025-26 ರ ಬಜೆಟ್ಟಿನ ಗಾತ್ರದಲ್ಲಿ ಶೇ. 5.07 ರಷ್ಟು ಮಾತ್ರ ಹೆಚ್ಚಳವಾಗಿದೆ. ಪರಿಷ್ಕೃತ ಆಯವ್ಯಯಕ್ಕೆ ಹೋಲಿಸಿದರೂ ಶೇ.7.4 ರಷ್ಟು ಮಾತ್ರ ಬೆಳವಣಿಗೆ ಇದೆ. ಹಣದುಬ್ಬರವನ್ನು ಕಳೆದು ಲೆಕ್ಕ ಹಾಕಿದರೆ ಈ ವರ್ಷದ ಬಜೆಟ್ ನಕಾರಾತ್ಮಕ ಬೆಳವಣಿಗೆಯನ್ನು ತೋರಿಸುತ್ತಿದೆ ಯಾಕೆ? ದೊಡ್ಡ ಆರ್ಥಿಕ ತಜ್ಞರುಗಳಂತೆ ಮಾತನಾಡುವ ಬಿಜೆಪಿಯವರು ಈ ಸತ್ಯವನ್ನು ಯಾಕೆ ಮುಚ್ಚಿಡುತ್ತಿದ್ದಾರೆ? ಎಂದಿದ್ದಾರೆ.
ನಮ್ಮ ಎರಡು ವರ್ಷಗಳ ಬಜೆಟ್ ಗಾತ್ರದ ಸರಾಸರಿ ಬೆಳವಣಿಗೆ ಶೇ.18.3 ರಷ್ಟಿದೆ. ಬಿಜೆಪಿಯ 4 ವರ್ಷಗಳ ಅಧಿಕಾರಾವಧಿಯಲ್ಲಿ ಕೇವಲ ಶೇ.5 ರಷ್ಟಿತ್ತು.
ರಾಜ್ಯದ ಸ್ವಂತ ತೆರಿಗೆಯ ಬೆಳವಣಿಗೆ ಶೇ. 15 ರಷ್ಟಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಶೇ. 11 ರಷ್ಟು ಮಾತ್ರ ಇತ್ತು.
ನಾವು ಗ್ಯಾರಂಟಿ ಯೋಜನೆಗಳು ಸೇರಿದಂತೆ ವರ್ಷಕ್ಕೆ 90 ಸಾವಿರ ಕೋಟಿಗೂ…
— Siddaramaiah (@siddaramaiah) February 21, 2025
ಸಾಲದ ಬಗ್ಗೆ ಮಾತನಾಡುವ @BYVijayendra ಅವರು ನರೇಂದ್ರ ಮೋದಿಯವರ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕೇಂದ್ರದ ಸಾಲ ಎಷ್ಟಾಗಿದೆ? ರಾಜ್ಯಗಳ ಸಾಲ ಎಷ್ಟಾಗಿದೆ ಎಂಬುದನ್ನು ತಿಳಿದುಕೊಂಡರೆ ಒಳ್ಳೆಯದು.
2013-14 ರಲ್ಲಿ 53.11 ಲಕ್ಷ ಕೋಟಿ ರೂಗಳಷ್ಟಿದ್ದ ಕೇಂದ್ರದ ಸಾಲ @nsitharaman ಅವರೇ ಈ ಬಜೆಟ್ ನಲ್ಲಿ ಘೋಷಿಸಿರುವಂತೆ 2026 ರ ಮಾರ್ಚ್…
— Siddaramaiah (@siddaramaiah) February 21, 2025