HomeHealthHealth Tips: ಬಿಸಿಲಿನ ಪ್ರಖರತೆ, ಆರೋಗ್ಯ ಇಲಾಖೆಯಿಂದ ಜನರಿಗೆ ಸಲಹೆಗಳು

Health Tips: ಬಿಸಿಲಿನ ಪ್ರಖರತೆ, ಆರೋಗ್ಯ ಇಲಾಖೆಯಿಂದ ಜನರಿಗೆ ಸಲಹೆಗಳು

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ ಕಂಡುಬಂದ ಹಿನ್ನೆಲೆಯಲ್ಲಿ ಜನರು, ಗರ್ಭಿಣಿಯರು, ಬಾಣಂತಿಯರು, ಮಕ್ಕಳು ಹಾಗೂ ವಯೋವೃದ್ದರು ಆರೋಗ್ಯದ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮನವಿ ಮಾಡಿದೆ.

ಬೇಸಿಗೆಯಲ್ಲಿ ಯಾವ ಆಹಾರ ಸೇವಿಸಬೇಕು, ಬಿಸಿಲಿನಲ್ಲಿ ಹೊರ ಹೋಗುವಾಗ ಅನುಸರಿಸಬೇಕಾದ ಕ್ರಮಗಳ ಕುರಿತು ಸಲಹೆಗಳನ್ನು ನೀಡಲಾಗಿದೆ. ಮಾರ್ಚ್‌ನಿಂದ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಲಿದ್ದು, ಜನರು ಜಾಗೃತೆ ವಹಿಸಬೇಕು ಎಂದು ಮನವಿ ಮಾಡಲಾಗಿದೆ.

  • ಬೇಸಿಗೆ ಸಮಯದಲ್ಲಿ ಹೆಚ್ಚು ನೀರನ್ನು ಕುಡಿಯಬೇಕು.
  • ಮಜ್ಜಿಗೆ/ ಎಳನೀರು, ಹಣ್ಣಿನ ರಸವನ್ನು ಹೆಚ್ಚಾಗಿ ಸೇವಿಸಬೇಕು.
  • ನೀರಿನ ಅಂಶ ಹೆಚ್ಚಾಗಿರುವ ತರಕಾರಿಗಳು, ಹಣ್ಣುಗಳನ್ನು ಸೇವಿಸುವುದು ಉತ್ತಮ.
  • ಸಡಿಲವಾದ ತೆಳು ಬಣ್ಣದ ಹತ್ತಿಯ ಬಟ್ಟೆಯನ್ನು ಧರಿಸಬೇಕು ಹಾಗೂ ಗಾಳಿಯಾಡುವ ಪಾದರಕ್ಷೆ ಧರಿಸಬೇಕು.
  • ಹೊರಗಡೆ ತೆರಳುವ ವೇಳೆ ತಂಪು ಕನ್ನಡಕ, ಛತ್ರಿ, ಟವೆಲ್ ಅಥವಾ ಬಿಸಿಲಿನಿಂದ ಕಾಪಾಡಿಕೊಳ್ಳುವ ಸಾಮಾನ್ಯ ಕ್ರಮಗಳನ್ನು ಪಾಲಿಸಬೇಕು.
  • ರೇಡಿಯೊ, ದೂರದರ್ಶನ ಹಾಗೂ ದಿನಪತ್ರಿಕೆಗಳಲ್ಲಿ ಬಿಸಿಯಾದ ಗಾಳಿ/ ಶಾಖ ತರಂಗ (ಹೀಟ್ ವೇವ್)ದ ಬಗ್ಗೆ ನೀಡುವ ಮಾಹಿತಿ ಅನುಸಾರ ದೈನಂದಿನ ಚಟುವಟಿಕೆಗಳನ್ನು ಯೋಜಿಸಿಕೊಳ್ಳಬೇಕು.
  • ಬಿಸಿಲಿನಲ್ಲಿ ಹೊರಗಡೆ ಕಾರ್ಯನಿರ್ವಹಿಸುವವರು (ಜಮೀನು ಕೆಲಸ, ರಸ್ತೆ ಕಾಮಗಾರಿ ಮುಂತಾದವು) ಆದಷ್ಟು ಬೆಳಗ್ಗೆ 11 ಗಂಟೆಯ ಒಳಗೆ ಮತ್ತು ಸಂಜೆ 4 ಗಂಟೆ ನಂತರ ಕೈಗೊಳ್ಳುವುದು ಉತ್ತಮ.
  • ಹೆಚ್ಚು ಬಿಸಿಲಿನ ಅವಧಿಯಲ್ಲಿ ಶ್ರಮದಾಯಕ ಕೆಲಸಗಳಿಂದ ವಿಶ್ರಾಂತಿ ಪಡೆಯಬೇಕು.
  • ಬಿಸಿಲಿನಲ್ಲಿ ನಡೆಯುವಾಗ ಕಡ್ಡಾಯವಾಗಿ ಚಪ್ಪಲಿ ಧರಿಸಿ.
  • ಟೀ/ ಕಾಫಿ, ಹೆಚ್ಚು ಸಕ್ಕರೆ ಅಂಶವನ್ನು ಹೊಂದಿರುವ ಕಾರ್ಬೋನೇಟೆಡ್ ಪಾನೀಯ ಹಾಗೂ ಮದ್ಯಪಾನದಿಂದ ದೂರವಿರಿ.
  • ವ್ಯಕ್ತಿ ತೊದಲು ಮಾತು ಅಥವಾ ಅರ್ಥ ರಹಿತವಾಗಿ ಬಡಬಡಿಸಿದಲ್ಲಿ ಕೂಡಲೇ ನೆರಳಿನ ಪ್ರದೇಶಕ್ಕೆ ಸ್ಥಳಾಂತರಿಸಿ.
  • ಆತನನ್ನು ಕೆಳಗೆ ಮಲಗಿಸಿ ಕಾಲುಗಳನ್ನು ಮೇಲಕ್ಕೆ ಎತ್ತಿ ವಿಶ್ರಾಂತಿ ನೀಡಿ.
  • ಬಿಸಿಗಾಳಿ ಮತ್ತು ಅತಿಯಾದ ತಾಪಮಾನದಿಂದ ಆರೋಗ್ಯ ಸಮಸ್ಯೆಗಳು ಉಂಟಾದಲ್ಲಿ ಸಮೀಪದ ಆರೋಗ್ಯ ಕೇಂದ್ರವನ್ನು ಸಂಪರ್ಕಿಸಿ
  • ತುರ್ತು ಸಂದರ್ಭದಲ್ಲಿ 108/ 102 ಕ್ಕೆ ಕರೆ ಮಾಡಿ
For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular