ಛಾಪಾ ಕಾಗದ ವಹಿವಾಟುಗಳಿಗೆ ಡಿಜಿಟಲ್ ಇ – ಸ್ಟ್ಯಾಂಪ್ ವ್ಯವಸ್ಥೆ ಜಾರಿ ಮಾಡಲಾಗಿದೆ. ಡಿಜಿಟಲ್ ಸ್ಟ್ಯಾಂಪ್ ಪಡೆಯುವುದರ ಬಗ್ಗೆ ಮಾಹಿತಿ ಇಲ್ಲಿದೆ.
https://kaveri.karnataka.gov.in/landing-page ಭೇಟಿ ನೀಡಿ.
ಒಂದೇ ಬಾರಿ ನೋಂದಣಿ ಖಾತೆ ಸೃಷ್ಟಿಸಿ.
ಲಾಗಿನ್ ಆದ ಬಳಿಕ ಬೇಕಾದ ದಸ್ತಾವೇಜಿನ ಪ್ರಕಾರವನ್ನು (ಉದಾ: ಬಾಡಿಗೆ ಒಪ್ಪಂದ, ಅಫಿಡವಿಟ್, ಮಾರಾಟ ಒಪ್ಪಂದ) ಆಯ್ಕೆ ಮಾಡಿ ವಿವರಗಳನ್ನು ಭರ್ತಿ ಮಾಡಿ.
ಅರ್ಜಿದಾರರು ಹಾಗೂ ಸಹಿ ಮಾಡುವ ಎಲ್ಲರೂ Aadhaar ಆಧಾರಿತ ಪರಿಶೀಲನೆ ಮೂಲಕ ಗುರುತು ದೃಢೀಕರಿಸಿ.
ಆಸ್ತಿ ಸಂಬಂಧಿತ ದಸ್ತಾವೇಜುಗಳಿದ್ದರೆ, ಸಿಸ್ಟಂ ಸರ್ಕಾರಿ ಡೇಟಾ ಬೇಸ್‌ಗಳಿಂದ ಅಸ್ತಿ ಮಾಹಿತಿಯನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಿದೆ.
ನಿಮ್ಮ ಸ್ವಂತ ವಿಷಯವನ್ನು ಸೇರಿಸಿ ದಸ್ತಾವೇಜನ್ನು ಸಂಪೂರ್ಣವಾಗಿ ಡಿಜಿಟಲ್ ರೂಪದಲ್ಲಿ ಪಡೆಯಬಹುದು.
ಸ್ಟ್ಯಾಂಪ್ ಶುಲ್ಕ ಲೆಕ್ಕ ಹಾಕಿದ ನಂತರ, ಖಜಾನೆ ಪಾವತಿ ಗೇಟ್‌ವೇ ಮೂಲಕ ಪಾವತಿಸಿ.
ಪಾವತಿ ದೃಢಪಟ್ಟ ನಂತರ ಸಿಸ್ಟಂ ಡಿಜಿಟಲ್ ಇ-ಸ್ಟ್ಯಾಂಪ್ ಸೃಷ್ಟಿಯಾಗುತ್ತದೆ.
ಎಲ್ಲರ ಸಹಿ ಪಡೆಯಲು ಅವರ ಮೊಬೈಲ್‌ಗೆ ಲಿಂಕ್ ಬರುತ್ತದೆ. ಅದರಲ್ಲಿ Aadhaar e-Sign ಅಥವಾ DSC ಮೂಲಕ ಸಹಿ ಮಾಡಬಹುದು.
ಎಲ್ಲರೂ ಸಹಿ ಮಾಡಿದ ನಂತರ ನಿಮ್ಮ ಅಂತಿಮ ಸ್ಟ್ಯಾಂಪ್ ಮಾಡಲ್ಪಟ್ಟ ಹಾಗೂ ಸಹಿ ಮಾಡಲ್ಪಟ್ಟ ದಸ್ತಾವೇಜು ಕಾನೂನಿನಂತೆ ಮಾನ್ಯವಾಗುತ್ತದೆ.
ಇದನ್ನು ಡೌಗ್ಲೋಡ್ ಮಾಡಬಹುದು ಹಾಗೂ ನೋಂದಣಿಗೆ ಬಳಸಬಹುದು.
ನೋಂದಣಿ ಮತ್ತು ನೋಂದಣಿಯೇತರ ಛಾಪಾ ಕಾಗದ ವಹಿವಾಟುಗಳಿಗೆ ಬಳಸುವ ‘ಇ– ಸ್ಟ್ಯಾಂಪ್’ ಬದಲಿಗೆ ‘ಡಿಜಿಟಲ್ ಇ– ಸ್ಟ್ಯಾಂಪ್’ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. pic.twitter.com/t8IgUOuHJ9
— DIPR Karnataka (@KarnatakaVarthe) December 2, 2025
