HomeKarnatakaಬೆಂಗಳೂರಲ್ಲಿ ಸ್ವಾತಂತ್ರ್ಯ ದಿನಾಚರಣೆ ವೀಕ್ಷಿಸಲು ಇ-ಪಾಸ್ ಪಡೆಯುವುದು ಹೇಗೆ..? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರಲ್ಲಿ ಸ್ವಾತಂತ್ರ್ಯ ದಿನಾಚರಣೆ ವೀಕ್ಷಿಸಲು ಇ-ಪಾಸ್ ಪಡೆಯುವುದು ಹೇಗೆ..? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ನಗರದ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಆಗಸ್ಟ್ 15ರಂದು ನಡೆಯಲಿರುವ ರಾಜ್ಯಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ವೀಕ್ಷಿಸಲು ಸಾರ್ವಜನಿಕರಿಗೆ ಇ-ಪಾಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಆಸಕ್ತರು ಆಗಸ್ಟ್ 5ರಿಂದ 13ರ ಸಂಜೆ 5 ಗಂಟೆಯೊಳಗೆ ಸೇವಾ ಸಿಂಧು ವೆಬ್‌ಸೈಟ್‌ನಲ್ಲಿ ಅಗತ್ಯ ವೈಯಕ್ತಿಕ ವಿವರಗಳನ್ನು ದಾಖಲಿಸಿ ಇ-ಪಾಸ್ ಪಡೆಯಬಹುದಾಗಿದೆ. ಪರೇಡ್ ಮೈದಾನ ಪ್ರವೇಶಕ್ಕೆ ಇ-ಪಾಸ್‌ನ ಮುದ್ರಿತ ಅಥವಾ ಮೊಬೈಲ್‌ನಲ್ಲಿರುವ ಡಿಜಿಟಲ್ ಪ್ರತಿಯನ್ನು ಕಡ್ಡಾಯವಾಗಿ ಹೊಂದಿರಬೇಕು.

ಬೆಂಗಳೂರು ನಗರದಲ್ಲಿ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಆಗಸ್ಟ್ 15 ರಂದು ನಡೆಯಲಿರುವ ರಾಜ್ಯ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ವೀಕ್ಷಿಸಿಸಲು ಆಸಕ್ತಿ ಹೊಂದಿರುವ ಸಾರ್ವಜನಿಕರಿಗೆ ಇ-ಪಾಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕಾಂತರಾಜು ಪಿ.ಎಸ್ ಅವರು ತಿಳಿಸಿದ್ದಾರೆ.

ಆಸಕ್ತರು ಸೇವಾ ಸಿಂಧು ವೆಬ್ ಸೈಟ್ (www.sevasindhu.karnataka.gov.in) ನಲ್ಲಿ ಆಗಸ್ಟ್ 05 2026 ರಿಂದ ಆಗಸ್ಟ್ 13 2026 ರ ಸಂಜೆ 5.00 ಗಂಟೆಯೊಳಗೆ ಸೇವಾ ಸಿಂಧು ವೆಬ್ ಸೈಟ್ ನಲ್ಲಿ ಅಗತ್ಯವಿರುವ ಎಲ್ಲಾ ವೈಯಕ್ತಿಕ ವಿವರಗಳನ್ನು ನಮೂದಿಸಿ ಇ-ಪಾಸ್ ಗಳನ್ನು ಪಡೆಯಬಹುದು. ಇ-ಪಾಸ್ ಗಳನ್ನು ಹೊಂದಿರುವವರು ಪರೇಡ್ ಮೈದಾನದ ಪ್ರವೇಶ ದ್ವಾರ ಸಂಖ್ಯೆ : 05 ರಲ್ಲಿ ಪರಿಶೀಲನೆಗಾಗಿ ಇ-ಪಾಸ್ ನ ಮುದ್ರಿತ ಪ್ರತಿಯನ್ನು ಅಥವಾ ಡಿಜಿಟಲ್ (ಮೊಬೈಲ್ ) ಪ್ರತಿಯನ್ನು ಕಡ್ಡಾಯವಾಗಿ ಹೊಂದಿರಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇ-ಪಾಸ್ ನೋಂದಣಿ ಪ್ರಕ್ರಿಯೆ ಕುರಿತು ಸಹಾಯಕ್ಕಾಗಿ ಸೇವಾ ಸಿಂಧು ವೈಬ್ ಸೈಟ್ ನಲ್ಲಿ ಸಹಾಯ ವಿಭಾಗವನ್ನು ವಿಕ್ಷೀಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular